ಕೊಟ್ಟಾಯಂ: ಹಿರಿಯ ಕಾಂಗ್ರೆಸ್ ನಾಯಕ ಪಿಟಿ ಥಾಮಸ್ (70) ಇಂದು ನಿಧನರಾಗಿದ್ದಾರೆ. ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ವೆಲ್ಲೂರು ವೈದ್ಯಕೀಯ ಕಾಲೇಜಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಪಿಟಿ ಥಾಮಸ್ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದರು ಮತ್ತು 2016 ರಿಂದ ತೃಕ್ಕಾಕರ ವಿಧಾನಸಭಾ ಸದಸ್ಯರಾಗಿದ್ದರು. 2009-2014 ರವರೆಗೆ ಲೋಕಸಭಾ ಸದಸ್ಯರಾಗಿದ್ದರು.
ಥಾಮಸ್ ವಿದ್ಯಾರ್ಥಿಯಾಗಿದ್ದಾಗ ಕೆಎಸ್‌ಯುನಲ್ಲಿ ಸಕ್ರಿಯರಾಗಿದ್ದರು. ಕೆಎಸ್ ಒಯು ಘಟಕದ ಉಪಾಧ್ಯಕ್ಷರಾಗಿ, ಕಾಲೇಜು ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ, ಇಡುಕ್ಕಿ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.