ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 9,216 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 391 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಒಂದೇ ದಿನ 8,612 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ಕೋವಿಡ್‌ನಿಂದ ಚೇತರಿಸಿಕೊಂಡವರ ಸಂಖ್ಯೆ 3,40,45,666ಕ್ಕೆ ತಲುಪಿದೆ.
ಈವರೆಗೆ 3,46,15,757 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 4,70,115 ಮಂದಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.
ದೇಶದಲ್ಲಿ ಸದ್ಯ ಒಟ್ಟು 99,976 ಸಕ್ರಿಯ ಪ್ರಕರಣಗಳಿವೆ. ದೇಶದಾದ್ಯಂತ ಈವರೆಗೆ 125.8 ಕೋಟಿ ಡೋಸ್ ಲಸಿಕೆ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.