ನವದೆಹಲಿ:ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 223,713,222ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 200,206,867ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 255,943,052 ಪ್ರಕರಣಗಳು ಮುಕ್ತಾಯಗೊಂಡಿವೆ.
2021ರ ಜೂನ್ 21ರಿಂದ ಸಾರ್ವತ್ರಿಕ ಕೋವಿಡ್-19 ಲಸಿಕೀಕರಣದ ಹೊಸ ಹಂತ ಆರಂಭವಾಗಿದೆ. ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು.
ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.
ಭಾರತದಲ್ಲಿ ಜನವರಿ 10,2022ರಿಂದ ವೈದ್ಯಕೀಯ ಸಿಬ್ಬಂದಿಗೆ ಹಾಗೂ ಮೊದಲ ಶ್ರೇಣಿ ಕಾರ್ಮಿಕರಿಗೆ ಬೂಸ್ಟರ್ ಡೋಸ್ ನೀಡಲಾಗುವುದು, ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಹರಡುವಿಕೆ ಭೀತಿ ನಡುವೆ ಭಾರತದಲ್ಲಿ 15 ವರ್ಷದಿಂದ 18 ವರ್ಷದ ಮಕ್ಕಳಿಗೂ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಡಿಸೆಂಬರ್ 27) ಇಲ್ಲಿದೆ.
ಭಾರತದಲ್ಲಿ 24 ಗಂಟೆಗಳಲ್ಲಿ 7,091 ರೋಗಿಗಳು ಚೇತರಿಕೆ
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 6,531 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 34,793,333ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 479,997ಕ್ಕೆ ಏರಿಕೆಯಾಗಿದೆ, 34,237,495ಮಂದಿ ಚೇತರಿಕೆ ಹೊಂದಿದ್ದಾರೆ, ಕಳೆದ 24 ತಾಸುಗಳಲ್ಲೇ 7,091ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಚೇತರಿಕೆ ದರ ಒಟ್ಟಾರೆ 97.68%ಗೆ ಸುಧಾರಣೆ ಕಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು
ಸೆಪ್ಟೆಂಬರ್ 9ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 280,410,835ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 5,418,823ಕ್ಕೇರಿದೆ. ಒಟ್ಟಾರೆ, 250,524,229ಮಂದಿ ಗುಣಮುಖರಾಗಿದ್ದಾರೆ. ಒಟ್ಟು 24,467,783 ಸಕ್ರಿಯ ಪಾಸಿಟಿವ್ 88,413 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 255,943,052 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
- ಕೊರೊನಾವೈರಸ್ ಟಾಪ್ 10 ದೇಶಗಳು
- ಯುಎಸ್ಎ: 53,222,424ಪ್ರಕರಣಗಳು
- ಭಾರತ: 34,793,333
- ಬ್ರೆಜಿಲ್: 22,239,436
- ಯುಕೆ: 11,891,292
- ರಷ್ಯಾ: 10,415,230
- ಟರ್ಕಿ: 9,307,124
- ಫ್ರಾನ್ಸ್: 9,116,068
- ಜರ್ಮನಿ: 7,009,634
- ಇರಾನ್: 6,184,762
- ಸ್ಪೇನ್: 5,718,007
ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು
ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
- ಯುಎಸ್ಎ: ಮೃತರ ಸಂಖ್ಯೆ 837,854
- ಬ್ರೆಜಿಲ್: 618,484
- ಭಾರತ: 479,997
- ರಷ್ಯಾ: 305,155
- ಮೆಕ್ಸಿಕೋ: 298,777
- ಯುಕೆ: 147,857
- ಇಂಡೋನೇಷಿಯಾ: 144,063
- ಇಟಲಿ: 136,611
- ಕೊಲಂಬಿಯಾ: 129,761
- ಫ್ರಾನ್ಸ್: 122,642
ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ
ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:
- ಯುಎಸ್ಎ: 41,031,018
- ಭಾರತ: 34,237,495
- ಬ್ರೆಜಿಲ್: 21,414,318
- ಯುಕೆ: 9,961,369
- ರಷ್ಯಾ: 9,293,486
- ಟರ್ಕಿ: 8,943,724
- ಫ್ರಾನ್ಸ್: 7,805,930
- ಜರ್ಮನಿ: 6,156,500
- ಇರಾನ್: 6,026,378
- ಸ್ಪೇನ್: 5,002,310
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)