HEALTH TIPS

ಭಾರತದ ಕೋವಿಡ್ ಲಸಿಕೆ ಅಭಿಯಾನಕ್ಕೆ 1 ವರ್ಷ: ಆರೋಗ್ಯ ಕಾರ್ಯಕರ್ತರು, ವಿಜ್ಞಾನಿಗಳಿಗೆ ಶುಭಾಶಯ ತಿಳಿಸಿದ ಮನ್ಸುಖ್ ಮಾಂಡವಿಯಾ

     ನವದೆಹಲಿ: ಭಾರತದ COVID-19 ಲಸಿಕೆ ಅಭಿಯಾನ ಆರಂಭವಾಗಿ ಭಾನುವಾರಕ್ಕೆ ಒಂದು ವರ್ಷ ಪೂರ್ಣಗೊಂಡಿದ್ದು, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಇದನ್ನು "ವಿಶ್ವದ ಅತ್ಯಂತ ಯಶಸ್ವಿ ಅಭಿಯಾನ" ಎಂದು ಕರೆದಿದ್ದಾರೆ. ಅಲ್ಲದೆ, ಆರೋಗ್ಯ ಕಾರ್ಯಕರ್ತರು, ವಿಜ್ಞಾನಿಗಳು ಮತ್ತು ದೇಶದ ಜನರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

      ಸಾಮಾಜಿಕ ಜಾಲತಾಣ ಟ್ವಿಟರ್ ಟ್ವೀಟ್ ಮಾಡಿರುವ ಮನ್ಸುಖ್ ಮಾಂಡವಿಯಾ ಅವರು, "ಇಂದು ವಿಶ್ವದ ಅತಿದೊಡ್ಡ ಲಸಿಕೆ ಅಭಿಯಾನವು ಒಂದು ವರ್ಷವನ್ನು ಪೂರೈಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, ಎಲ್ಲರ ಪ್ರಯತ್ನದಿಂದ ಈ ಅಭಿಯಾನ ಪ್ರಾರಂಭವಾಗಿತ್ತು, ಇಂದು ಇದು ವಿಶ್ವದ ಅತ್ಯಂತ ಯಶಸ್ವಿ ಲಸಿಕೆ ಅಭಿಯಾನವಾಗಿದೆ. ಈ ಸಂದರ್ಭದಲ್ಲಿ ಎಲ್ಲಾ ಆರೋಗ್ಯ ಕಾರ್ಯಕರ್ತರು, ವಿಜ್ಞಾನಿಗಳು ಹಾಗೂ ದೇಶದನ ಜನತೆಗೆ ಶುಭಾಶಯಗಳನ್ನು ಕೋರುತ್ತೇನೆಂದು ಹೇಳಿದ್ದಾರೆ. 

     ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

     ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,56,76,15,454 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries