ಭಿವಾನಿ: ಹರಿಯಾಣ ರಾಜ್ಯದ ಭಿವಾನಿ ಜಿಲ್ಲೆಯ ದಡಮ್ ಗಣಿಗಾರಿಕೆ ಪ್ರದೇಶದಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಗಣಿಗಾರಿಕೆ ವೇಳೆ ಭೂ ಕುಸಿತಗೊಂಡಿದ್ದು 10-15 ಮಂದಿ ಸಾವನ್ನಪ್ಪಿರುವ ಶಂಕೆಗಳು ವ್ಯಕ್ತವಾಗಿದೆ.
ಘಟನೆಯಲ್ಲಿ ಗಣಿಗಾರಿಕೆಗೆ ಬಳಸುತ್ತಿದ್ದ ವಾಹನಗಳು ಕೂಡ ಕುಸಿತಗೊಂಡಿರುವ ಭೂಮಿಯ ಅವಶೇಷಗಳ ಅಡಿಯಲ್ಲಿ ಹೂತು ಹೋಗಿವೆ ಎಂದು ಹೇಳಲಾಗುತ್ತಿದೆ.
ಇಂದು ಬೆಳಗ್ಗೆ 8.15ರ ಸುಮಾರಿಗೆ ಗಣಿಗಾರಿಕೆ ನಡೆಯುತ್ತಿದ್ದಾಗ ಭೂ ಕುಸಿತ ಎದುರಾಗಿದೆ ಎಂದು ತಿಳಿದುಬಂದಿದೆ.
ಘಟನೆ ವೇಳೆ ಸ್ಥಳದಲ್ಲಿ ನಿಂತಿದ್ದ ಸುಮಾರು ಅರ್ಧ ಡಜನ್ ಪಾಪ್‌ಲ್ಯಾಂಡ್ ಯಂತ್ರಗಳು ಮತ್ತು ಡಂಪರ್‌ಗಳು ಹೂತುಹೋಗಿವೆ ಎಂದು ವರದಿಗಳಿಂದ ತಿಳಿದುಬಂದಿದೆ.
ಇದರೊಂದಿಗೆ 10-15ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಲುಕಿ ಜೀವಂತ ಸಮಾಧಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ
ಈಗಾಗಲೇ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದ್ದು, ಮೃತರ ಬಗ್ಗೆ ಸ್ಥಳೀಯ ಅಧಿಕಾರಿಗಳು ಇನ್ನಷ್ಟೇ ಸ್ಪಷ್ಪನೆ ನೀಡಬೇಕಿದೆ.