ಪಟ್ನಾ: 11 ಬಾರಿ ಕೋವಿಡ್ ಲಸಿಕೆ ಹಾಕಿಸಿಕೊಂಡ ವೃದ್ಧನ ವಿರುದ್ಧ ಬಿಹಾರದ ಮಾದೇಪುರದಲ್ಲಿ ಭಾನುವಾರ ಎಫ್‌ಐಆರ್ ದಾಖಲಾಗಿದೆ.
ಪಟ್ನಾ: 11 ಬಾರಿ ಕೋವಿಡ್ ಲಸಿಕೆ ಹಾಕಿಸಿಕೊಂಡ ವೃದ್ಧನ ವಿರುದ್ಧ ಬಿಹಾರದ ಮಾದೇಪುರದಲ್ಲಿ ಭಾನುವಾರ ಎಫ್‌ಐಆರ್ ದಾಖಲಾಗಿದೆ.
ಮಾದೇಪುರದ ಪುರೈನಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಅನ್ನು ದಾಖಲಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಕೋವಿಡ್ ಮಾರ್ಗಸೂಚಿಗಳ ಉಲ್ಲಂಘನೆ ಮತ್ತು ಆರೋಗ್ಯ ಅಧಿಕಾರಿಗಳ ಕರ್ತವ್ಯ ಲೋಪದ ಕುರಿತು ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ರಾಜೇಶ್ ಕುಮಾರ್ ಹೇಳಿದ್ದಾರೆ.
ಮಾದೇಪುರ ಜಿಲ್ಲೆಯ ಉರೈ ಗ್ರಾಮದ ನಿವಾಸಿ 84 ವರ್ಷದ ಬ್ರಹ್ಮದೇವ್ ಮಂಡಲ್ ಎಂಬುವವರು 11 ಬಾರಿ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದರು. 12ನೇ ಬಾರಿಗೆ ಲಸಿಕೆ ಹಾಕಿಸಿಕೊಳ್ಳಲು ತೆರಳಿದಾಗ ಆರೋಗ್ಯ ಸಿಬ್ಬಂದಿ ಅವರನ್ನು ಗುರುತಿಸಿದ್ದರು.
ಅಂಚೆ ಇಲಾಖೆಯ ನಿವೃತ್ತ ಉದ್ಯೋಗಿ ಮಂಡಲ್, ಲಸಿಕೆ ಹಾಕಿಸಿಕೊಳ್ಳಲು ಎಂಟು ಬಾರಿ ಆಧಾರ್ ಕಾರ್ಡ್, ಮೂರು ಬಾರಿ ವೋಟರ್ ಐಡಿ ಬಳಸಿದ್ದರು ಎಂದು ತಿಳಿದುಬಂದಿದೆ.