ನವದೆಹಲಿ: ದೇಶದಲ್ಲಿ ಮಾರ್ಚ್‌ನಿಂದ 12 ರಿಂದ 14 ವರ್ಷದ ಮಕ್ಕಳಿಗೂ ಕೋವಿಡ್ ಲಸಿಕೆ ನೀಡಲು ಪ್ರಾರಂಭಿಸಬಹುದು ಮತ್ತು ಆ ವೇಳೆಗೆ 15-18 ವರ್ಷದ ಎಲ್ಲರೂ ಸಂಪೂರ್ಣವಾಗಿ ಲಸಿಕೆ ಪಡೆಯುವ ಸಾಧ್ಯತೆ ಇದೆ ಎಂದು ಎನ್‌ಟಿಜಿಐನ ಕೋವಿಡ್ ವರ್ಕಿಂಗ್ ಗ್ರೂಪ್ ಅಧ್ಯಕ್ಷ ಡಾ ಎನ್‌ಕೆ ಅರೋರಾ ಅವರು ಸೋಮವಾರ ಹೇಳಿದ್ದಾರೆ.
15-18 ವಯೋಮಾನದ ಅಂದಾಜು 7.4 ಕೋಟಿ (7,40,57,000) ಮಕ್ಕಳ ಪೈಕಿ ಈಗಾಗಲೇ 3.45 ಕೋಟಿಗೂ ಹೆಚ್ಚು ಮಕ್ಕಳಿಗೆ ಕೋವಾಕ್ಸಿನ್‌ನ ಮೊದಲ ಡೋಸ್ ಲಸಿಕೆ ನೀಡಲಾಗಿದೆ. 28 ದಿನಗಳ ನಂತರ ಅವರು ಎರಡನೇ ಡೋಸ್ ಲಸಿಕೆ ಪಡೆಯಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
15 ರಿಂದ 18 ವರ್ಷದವರಿಗೆ ಮೊದಲ ಡೋಸ್ ಬಳಿಕ ಫೆಬ್ರವರಿಯಲ್ಲಿ ಎರಡನೇ ಡೋಸ್‍ಗೂ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಫೆಬ್ರವರಿ ಅಂತ್ಯದ ವೇಳೆಗೆ ಎರಡನೇ ಡೋಸ್ ಕೂಡಾ ನೀಡಲಾಗುವುದು. ಈ ಪ್ರಕ್ರಿಯೆ ಬಳಿಕ 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ವ್ಯಾಕ್ಸಿನ್ ನೀಡಲಾಗುವುದು ಎಂದು ಅವರು ವಿವರಿಸಿದ್ದಾರೆ
15-18 ವಯೋಮಾನದವರಿಗೆ ಎರಡೂ ಡೋಸ್ ಲಸಿಕೆ ನೀಡಿದ ನಂತರ, ಮಾರ್ಚ್‌ನಲ್ಲಿ 12-14 ವಯೋಮಾನದವರಿಗೆ ಲಸಿಕೆ ಅಭಿಯಾನ ಆರಂಭಿಸುವ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.