ನವದೆಹಲಿ: ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಪ್ರಧಾನಿ ನರೇಂದ್ರ ಮೋದಿಯವರ ಭದ್ರತಾ ಲೋಪದ ಕುರಿತು ವ್ಯಂಗ್ಯವಾಡಿದ್ದಾರೆ.
ನವದೆಹಲಿ: ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಪ್ರಧಾನಿ ನರೇಂದ್ರ ಮೋದಿಯವರ ಭದ್ರತಾ ಲೋಪದ ಕುರಿತು ವ್ಯಂಗ್ಯವಾಡಿದ್ದಾರೆ.
ಕೃಷಿ ಕಾನೂನುಗಳನ್ನು ರದ್ದುಪಡಿಸಲು ಒತ್ತಾಯಿಸಿ ರೈತರು ಒಂದು ವರ್ಷಕ್ಕೂ ಹೆಚ್ಚು ಕಾಲ ಕಾಯಬೇಕಾಯಿತು.
'ನಾನು ಪ್ರಧಾನಿಯವರನ್ನು ಕೇಳಲು ಬಯಸುತ್ತೇನೆ. ನಮ್ಮ ರೈತ ಸಹೋದರರು ದೆಹಲಿಯ ಗಡಿಯಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು. ಅವರು ಒಂದೂವರೆ ವರ್ಷ ಅಲ್ಲಿಯೇ ಇದ್ದರು. ಈ ಬಗ್ಗೆ ನಿಮ್ಮ ಮಾಧ್ಯಮಗಳು ಏನನ್ನೂ ಹೇಳಲಿಲ್ಲವೇಕೆ' ಎಂದು ಸಿಧು ಪ್ರಶ್ನಿಸಿದ್ದಾರೆ.
ಪಂಜಾಬ್‌ನ ಫಿರೋಜ್‌ಪುರದಲ್ಲಿ ಪ್ರಮುಖ ಭದ್ರತಾ ಲೋಪವಾಗಿತ್ತು. ಆ ಕಾರಣ ಮೋದಿ ಹಾಗೂ ಅವರ ಬೆಂಗಾವಲು ಪಡೆ ಫ್ಲೈಓವರ್‌ನಲ್ಲಿ ಸಿಲುಕಿಕೊಂಡಿತ್ತು. ಬಳಿಕ, ರ್‍ಯಾಲಿ ಸೇರಿದಂತೆ ಯಾವುದೇ ಕಾರ್ಯಕ್ರಮಕ್ಕೆ ಹಾಜರಾಗದೆ ಪ್ರಧಾನಿ ಪಂಜಾಬ್‌ನಿಂದ ಮರಳಿದ್ದರು.