ಉಪ್ಪಳ: ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ದಾವಣಗೆರೆ ಇದರ ಕೇರಳ ರಾಜ್ಯ ಶಾಖೆಯ ಉದ್ಘಾಟನಾ ಸಮಾರಂಭ ಜ.16 ರಂದು ಅಪರಾಹ್ನ 3ಗಂಟೆಗೆ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಗಾಯತ್ರಿ ಮಂಟಪದಲ್ಲಿ ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಲಿದೆ.
ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿಯವರು ಉದ್ಘಾಟಿಸುವರು. ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ದಾವಣಗೆರೆ ಇದರ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ ಅಧ್ಯಕ್ಷತೆಯನ್ನು ವಹಿಸುವರು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಘಟಕದ ಅಧ್ಯಕ್ಷ ಎಸ್.ವಿ ಭಟ್ ಮುಖ್ಯ ಅಥಿಗಳಾಗಿ ಭಾಗವಹಿಸುವರು. ಕಲಾಕುಂಚ ಗಡಿನಾಡ ಘಟಕ ಕೇರಳ ರಾಜ್ಯ ಶಾಖೆಯ ನೂತನ ಅಧ್ಯಕ್ಷೆ ಜಯಲಕ್ಷ್ಮೀ ಕಾರಂತ್ ಮಂಗಲ್ಪಾಡಿ, ಕಲಾಕುಚ ಮಹಿಳಾ ವಿಭಾಗ, ದಾವಣಗೆರೆ ಇದರ ಸಂಸ್ಥಾಪಕಿ ಜ್ಯೋತಿ ಗಣೇಶ್ ಶಣೈ, ಕಲಾಕುಂಚ ಮಹಿಳಾ ಘಟಕ ದಾವಣಗೆರೆ, ಕರ್ನಾಟಕ ಅಧ್ಯಕ್ಷೆ ಹೇಮ ಶಾಂತಪ್ಪ ಪೂಜಾರಿ ಉಪಸ್ಥಿತರಿರುವರು.