HEALTH TIPS

ಕೋವಿಡ್-19: ದೇಶದಲ್ಲಿ 1.68 ಲಕ್ಷ ಹೊಸ ಪ್ರಕರಣ ಪತ್ತೆ, 277 ಮಂದಿ ಸಾವು, ಒಟ್ಟು 4,461 ಒಮಿಕ್ರಾನ್

     ನವದೆಹಲಿ: ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 1,68,063 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,58,75,790ಕ್ಕೆ ಏರಿಕೆಯಾಗಿದೆ.

              69,959 ಸೋಂಕಿತರು              ಗುಣಮಮುಖರಾಗಿದ್ದಾರೆ. 277 ಮಂದಿ ಸಾವನ್ನಪ್ಪಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇ. 10. 64 ರಷ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,21,446ಕ್ಕೆ ಏರಿಕೆಯಾಗಿದೆ. 

     ಜನವರಿ 10 ರಂದು ಒಟ್ಟು 15,79,928 ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 69,31,55,280 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

      ದೆಹಲಿಯಾದ್ಯಂತ ಇರುವ ಕಾರಾಗೃಹಗಳಲ್ಲಿ ಈವರೆಗೂ 66 ಕೈದಿಗಳು ಮತ್ತು 46 ಜೈಲು ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 4,461ಕ್ಕೆ ಏರಿಕೆಯಾಗಿದೆ. ಇದರಲ್ಲಿ ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ವರದಿಯಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries