ನವದೆಹಲಿ: ಓಮಿಕ್ರಾನ್ ಸೋಂಕು ಭೀತಿ ನಡುವೆಯೇ ದೇಶದಲ್ಲಿ ಮತ್ತೆ ಕೋವಿಡ್ ಸ್ಫೋಟಗೊಂಡಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1,79,723 ಹೊಸ ಪ್ರಕರಣಗಳು ಪತ್ತೆಯಾಗಿದ್ದು 146 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,57,07,727ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,83,936ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,23,619ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 40,863 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,44,53,603ಕ್ಕೆ ತಲುಪಿದೆ.
ಭಾರತದಲ್ಲಿ ಒಂದೇ 13,52,717 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 69,15,75,352 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,51,57,60,645 ಕೋಟಿ ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.