ನವದೆಹಲಿ: ಭಾರತದಲ್ಲಿ ಹೊಸ ಕೊರೋನಾ ಪ್ರಕರಣಗಳು ಶನಿವಾರ ಇಳಿಕೆಯಾಗಿದೆ. ಶನಿವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯಗೊಳ್ಳುವ 24 ಗಂಟೆ ಅವಧಿಯಲ್ಲಿ ದೇಶದಲ್ಲಿ 2,34,281 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 893 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,10,92,522ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,94,091ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18,84,937ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 3,52,784 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,87,13,494ಕ್ಕೆ ತಲುಪಿದೆ.
ಭಾರತದಲ್ಲಿ ಒಂದೇ 17,59,434 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 72,57,74,705 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,65,70,60,692 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.