HEALTH TIPS

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 58,097 ಹೊಸ ಪ್ರಕರಣ, 534 ಸಾವು

         ನವದೆಹಲಿ: ಓಮಿಕ್ರಾನ್ ಸೋಂಕು ಭೀತಿ ನಡುವೆಯೇ ಕರ್ನಾಟರ ಸೇರಿದಂತೆ ದೇಶಾದ್ಯಂತ ಕೋವಿಡ್ ಸೋಂಕಿತರ ಸಂಖ್ಯೆ ಹೊಸ ವರ್ಷದ ನಂತರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 58,097 ಹೊಸ ಪ್ರಕರಣಗಳು ಪತ್ತೆಯಾಗಿದ್ದು 534 ಮಂದಿ ಮೃತಪಟ್ಟಿದ್ದಾರೆ.

        ದೇಶದಲ್ಲಿ ಒಟ್ಟು ಸಕ್ರಿಯ ಕೋವಿಡ್ ಸೋಂಕಿತರ  ಸಂಖ್ಯೆ 2,14,004ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 15 ಸಾವಿರದ 389 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,43,21,803ಕ್ಕೆ ತಲುಪಿದೆ. ಇದುವರೆಗೆ ಕೊರೋನಾ ಸೋಂಕಿನಿಂದ 3 ಕೋಟಿಯ 43 ಲಕ್ಷದ 21 ಸಾವಿರದ 803 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 4 ಲಕ್ಷದ 82 ಸಾವಿರದ 551 ಆಗಿದೆ. 

         ಭಾರತದಲ್ಲಿ ಒಂದೇ 48,637 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೆ 68.38 ಕೋಟಿ ಜನರನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದೆ. 

         ಭಾರತದಲ್ಲಿ ಕಳೆದ ವರ್ಷ 2021ರ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ಇದೀಗ 15ರಿಂದ 18 ವರ್ಷದ ಮಕ್ಕಳಿಗೆ ಸಹ ಕೊರೋನಾ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 147.72 ಕೋಟಿ ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries