ನವದೆಹಲಿ :2021ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರಕಟಿಸಿದ್ದಾರೆ. ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಮಾಜಿ ಸಿಡಿಎಸ್ ಜೆನರಲ್ ಬಿಪಿನ್ ರಾವತ್ ಹಾಗೂ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ರಿಗೆ ಪದ್ಮ ವಿಭೂಷಣ ಘೋಷಿಸಲಾಗಿದೆ.

ಗುಲಾಂ ನಬಿ ಆಝಾದ್, ಬುದ್ಧದೇಬ್ ಬಟ್ಟಾಚಾರ್ಯ, ಗೂಗಲ್ ಸಿಇಒ ಸುಂದರ್ ಪಿಚೈ, ಮೈಕ್ರೋಸಾಪ್ಟ್ ನ ಸತ್ಯ ನಾಡೆಲ್ಲ ಸೇರಿದಂತೆ ಹಲವರಿಗೆ ಪದ್ಮಭೂಷಣ ಘೋಷಿಸಲಾಗಿದ್ದು, ಕರ್ನಾಟಕದ ಸುಬ್ಬಣ್ಣ ಅಯ್ಯಪ್ಪನ್ ಸೇರಿದಂತೆ ಹಲವರಿಗೆ ಪದ್ಮಪ್ರಶಸ್ತಿ ಘೋಷಿಸಲಾಗಿದೆ.
ಸಾಹಿತಿ ಸಿದ್ದಲಿಂಗಯ್ಯ ಅವರಿಗೆ ಮರಣೋತ್ತರವಾಗಿ ಪದ್ಮಶ್ರಿ ನೀಡಲಾಗಿದ್ದು, ಕಲಾ ವಿಭಾಗದಲ್ಲಿ ಎಚ್ ಆರ್ ಕೇಶವಮೂರ್ತಿ, ವಿಜ್ಞಾನ ವಿಭಾಗದಲ್ಲಿ ಸುಬ್ಬಣ್ಣ ಅಯ್ಯಪ್ಪಣ್ಣ, ಕೃಷಿ ಸಂಶೋಧನೆಯಲ್ಲಿ ಅಬ್ದುಲ್ ಖಾದರ್ ನಡಕಟ್ಟಿನ್ ಹಾಗೂ ಅಮೈ ಮಹಾಲಿಂಗ್ ನಾಯ್ಕ್ ಅವರಿಗೆ ಪದ್ಮಶ್ರಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರಿಗೆ ಪದ್ಮಭೂಷಣ ಹಾಗೂ ಲಸಿಕೆ ತಯಾರಕರಾದ ಕೃಷ್ಣ ಎಲ್ಲಾ, ಸುಚಿತ್ರಾ ಎಲ್ಲಾ, ಸೈರಸ್ ಪೂನವಾಲಾ, ಬುದ್ಧದೇಬ್ ಭಟ್ಟಾಚಾರ್ಯಾ, ಮೈಕ್ರೋಸಾಫ್ಟ್ ಮುಖ್ಯಸ್ಥ ಸತ್ಯ ನಾಡೆಲ್ಲಾ ಹಾಗೂ ಗೂಗಲ್ ಸಿಇಒ ಸುಂದರ್ ಪಿಚೈ ಅವರು ಸೇರಿದಂತೆ 128 ಸಾಧಕರಿಗೆ ಪದ್ಮ ಪುರಸ್ಕಾರಗಳನ್ನು ನೀಡಿ ಗೌರವಿಸಲಾಗಿದೆ.
ಈ ಬಾರಿ 4 ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಪದ್ಮಶ್ರೀ ಪ್ರಶಸ್ತಿಗಳು ಇವೆ. ಪ್ರಶಸ್ತಿ ಪುರಸ್ಕೃತರಲ್ಲಿ 34 ಮಹಿಳೆಯರು ಮತ್ತು 10 ವಿದೇಶಿಯರು ಮತ್ತು 13 ಮರಣೋತ್ತರ ಪ್ರಶಸ್ತಿ ಪುರಸ್ಕೃತರು ಇದ್ದಾರೆ.