HEALTH TIPS

ಭಾರತದಲ್ಲಿ ಕೊರೋನಾ ಸ್ಫೋಟ: ದೇಶದಲ್ಲಿ 24 ಗಂಟೆಗಳಲ್ಲಿ 2.64 ಲಕ್ಷ ಹೊಸ ಪತ್ತೆ, 315 ಮಂದಿ ಸಾವು

      ನವದೆಹಲಿ: ದೇಶದಲ್ಲಿ ಶುಕ್ರವಾರ ಬರೋಬ್ಬರಿ 2,64,202 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು. ಇದು ಕಳೆದ 236 ದಿನಗಳಲ್ಲೇ ಏಕದಿನದ ಅತ್ಯಧಿಕ ಸೋಂಕಾಗಿದೆ. ಜೊತೆಗೆ ಗುರುವಾರದ 2.47 ಲಕ್ಷ ಕೇಸುಗಳಿಗೆ ಹೋಲಿಕೆ ಮಾಡಿದರೆ ಒಂದೇ ದಿನದಲ್ಲಿ ಹೊಸ ಪ್ರಕರಣಗಳು ಶೇ.6.7ರಷ್ಟು ಏರಿಕೆಯಾಗಿದೆ. 

       ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 12,72,073ಕ್ಕೆ ಏರಿಕೆಯಾಗಿದ್ದು, ಇದು 217 ದಿನಗಳ ಗರಿಷ್ಠವಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 315 ಮಂದಿ ಸಾವನ್ನಪ್ಪಿದ್ದಾರೆ. 

      ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,65,82,129ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,85,350ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

      ಈ ನಡುವೆ ಕಳೆದ 24 ಗಂಟೆಗಳಲ್ಲಿ 1,09,345 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,48,24,706ಕ್ಕೆ ತಲುಪಿದೆ.

      ಭಾರತದಲ್ಲಿ ಒಂದೇ 18,86,935 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 69,73,11,627 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

     ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

     ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 15.17 ಕೋಟಿ ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries