ಭುವನೇಶ್ವರ: ಒಡಿಶಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ನಲ್ಲಿ ಸುಮಾರು 250 ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ.
ಇದರಿಂದಾಗಿ ಹೊರ ರೋಗಿಗಳ ಚಿಕಿತ್ಸಾ ವಿಭಾಗ (ಒಪಿಡಿ) ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ವೈದ್ಯಕೀಯ ಅಧೀಕ್ಷಕ ಪ್ರೊಫೆಸರ್ ಸಚ್ಚಿದಾನಂದ ಮೊಹಾಂತಿ ಹೇಳಿದ್ದಾರೆ.
ತುರ್ತು ಪ್ರಕರಣಗಳಿಗೆ ಒಳರೋಗಿಗಳ ವಿಭಾಗದಲ್ಲಿ ಚಿಕಿತ್ಸೆ ಕಲ್ಪಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ. ಕೋವಿಡ್ ಸೋಂಕಿನಿಂದ ಆಸ್ಪತ್ರೆಯನ್ನು ಸುಗಮವಾಗಿ ನಡೆಸಲು ಒಪಿಡಿ ಸೇವೆಗಳನ್ನು ಸ್ಥಗಿತಗೊಳಿಸಬೇಕಾಯಿತು ಎಂದು ಅವರು ಹೇಳಿದ್ದಾರೆ.
ಭುವನೇಶ್ವರ್ ಏಮ್ಸ್‌ನಲ್ಲಿ ಸ್ವಾಸ್ಥ್ಯ ಆಪ್, ಟೆಲಿಮೆಡಿಸಿನ್ ವಾಟ್ಸಾಪ್ ಕರೆ ಸೇವೆಗಳು ಮೊದಲಿನಂತೆ ಮುಂದುವರಿಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.