HEALTH TIPS

ಗೋವಾದಲ್ಲಿ ಕೋವಿಡ್ ಪಾಸಿಟಿವ್ ದರ ಶೇ. 26ಕ್ಕೆ ಏರಿಕೆ; ಶಾಲಾ-ಕಾಲೇಜ್ ಗಳು ಬಂದ್, ನೈಟ್ ಕರ್ಫ್ಯೂ ಜಾರಿ

    ಪಣಜಿ: ಗೋವಾದಲ್ಲಿ ಸೋಮವಾರ 631 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವ್ ದರ ಶೇಕಡಾ 16 ರಿಂದ 26.43 ಕ್ಕೆ ಜಿಗಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
     ಭಾನುವಾರ, ಗೋವಾದಲ್ಲಿ COVID-19 ಪಾಸಿಟಿವಿಟಿ ದರ ಶೇ. 10.7 ರಷ್ಟು ಇತ್ತು ಮತ್ತು 388 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಹೊಸ ಸೋಂಕಿನೊಂದಿಗೆ, ಗೋವಾದಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,82,201ಕ್ಕೆ ಏರಿದೆ.
      ಗೋವಾದಲ್ಲಿ ಸೋಮವಾರ ನಾಲ್ವರಿಗೆ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ದೃಢಪಟ್ಟಿದ್ದು, ಇದರೊಂದಿಗೆ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

       ಪಾಸಿಟಿವ್ ದರ ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗೋವಾ ಸರ್ಕಾರ ಜನವರಿ 26 ರವರೆಗೆ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲು ನಿರ್ಧರಿಸಿದೆ. ಅಲ್ಲದೆ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries