HEALTH TIPS

ಭಾರತದಲ್ಲಿ ಭಾರೀ ಪ್ರಮಾಣದಲ್ಲಿ ಏರುತ್ತಿರುವ ಕೊರೋನಾ: ದೇಶದಲ್ಲಿಂದು 2.71 ಲಕ್ಷ ಹೊಸ ಕೇಸ್ ಪತ್ತೆ, 314 ಮಂದಿ ಬಲಿ

     ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2,71,202 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 314 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 

     ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,71,22,164ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,86,066ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

     ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,50,377ಕ್ಕೆ ತಲುಪಿದೆ.

     ಈ ನಡುವೆ ಕಳೆದ 24 ಗಂಟೆಗಳಲ್ಲಿ 1,38,331 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,50,85,721ಕ್ಕೆ ತಲುಪಿದೆ.

      ಭಾರತದಲ್ಲಿ ಒಂದೇ 16,65,404 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 70,24,48,838 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

     ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

     ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,56,76,15,454 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

       ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 7,743ಕ್ಕೆ ಏರಿಕೆ:
     ಭಾರತದಲ್ಲಿ ಕೋವಿಡ್-19 ಸೋಂಕು ಉಲ್ಬಣವಾಗುತ್ತಿರುವ ಹೊತ್ತಿನಲ್ಲೇ ಓಮಿಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ವರೆಗೂ ದೇಶಾದ್ಯಂತ 7,743ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.

     ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶಾದ್ಯಂತ ಇರುವ ಒಟ್ಟಾರೆ ಓಮಿಕ್ರಾನ್ ಸೋಂಕಿತರ ಸಂಖ್ಯೆ 7,743ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

      ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ದೇಶದ ಒಟ್ಟು 28 ರಾಜ್ಯಗಳಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ತಿಳಿದುಬಂದಿದೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries