HEALTH TIPS

ಕರ್ನಾಟಕದಲ್ಲಿ 2 ವಾರ ಕಠಿಣ ನಿಯಮ ಜಾರಿ: ರಾಜ್ಯದಲ್ಲಿ ವೀಕೆಂಡ್ ಲಾಕ್‌ಡೌನ್, ಬೆಂಗಳೂರಿನಲ್ಲಿ ಶಾಲೆಗಳು ಬಂದ್

      ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಮತ್ತು ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವುದರಿಂದ ನಾಳೆ ರಾತ್ರಿ 10 ಗಂಟೆಯಿಂದ ಮುಂದಿನ ಎರಡು ವಾರ ಕಠಿಣ ನಿಮಯಗಳನ್ನು ಜಾರಿಗೊಳಿಸಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.  

      ಜನವರಿ 6ರಿಂದ ಈ ನಿಯಮಗಳು ಜಾರಿಯಾಗಲಿವೆ. ಇನ್ನು ಮುಂದಿನ ಎರಡು ವಾರಗಳು ವೀಕೆಂಡ್ ಕರ್ಫ್ಯೂ ಇರಲಿದ್ದು ಇದರ ಜೊತೆಗೆ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಸಹ ಮುಂದುವರೆಯಲಿದೆ. ನಾಳೆ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಅಗತ್ಯ ಸೇವೆ ಹೊರತುಪಡಿಸಿ ರಾಜ್ಯ ಸಂಪೂರ್ಣ ಲಾಕ್ ಆಗಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ ತಿಳಿಸಿದ್ದಾರೆ.

       ಎರಡು ವಾರಗಳ ಕಾಲ ಬೆಂಗಳೂರಿನಲ್ಲಿ ಶಾಲೆ ಮತ್ತು ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಆದರೆ 10, 11 ಮತ್ತು 12ನೇ ತರಗತಿಗಳು, ಮೆಡಿಕಲ್ ಮತ್ತು ಪ್ಯಾರಾಮೆಡಿಕಲ್ ಕಾಲೇಜುಗಳು ಮಾತ್ರ ನಡೆಯಲಿವೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ. 

 *ಚಿತ್ರಮಂದಿರ, ಬಾರ್ ಅಂಡ್ ರೆಸ್ಟೋರೆಂಟ್, ಪಬ್, ಕ್ಲಬ್ ಮತ್ತು ಹೋಟೆಲ್ ಗಳಲ್ಲಿ ಶೇಕಡ 50ರಷ್ಟು ಭರ್ತಿಗೆ ಮಾತ್ರ ಅವಕಾಶ. 

* ಹೊರಾಂಗಣ ಮದುವೆಗಳಿಗೆ 200 ಮಂದಿಗೆ ಅವಕಾಸ ಅವಕಾಶ. ಒಳಾಂಗಣ ಮದುವೆಗಳಿಗೆ 100 ಜನರಿಗೆ ಮಾತ್ರ ಅವಕಾಶ. 

* ಗೋವಾ, ಮಹಾರಾಷ್ಟ್ರ, ಕೇರಳದಿಂದ ಬರುವವರು ಕಡ್ಡಾಯವಾಗಿ ಆರ್ ಟಿಪಿಸಿಆರ್ ನೆಗೆಟಿವ್ ವರದಿ ತರಬೇಕು. 

* ಧಾರ್ಮಿಕ ಕ್ಷೇತ್ರಗಳಲ್ಲಿ ಎಂದಿನಂತೆ ಪೂಜೆ-ಪುನಸ್ಕಾರಗಳು ನಡೆಯುತ್ತವೆ. ಆದರೆ ಏಕಕಾಲಕ್ಕೆ 50 ಮಂದಿ ಪ್ರವೇಶಕ್ಕೆ ಮಾತ್ರ ಅವಕಾಶ ನೀಡಲಾಗಿದೆ. 

* ರಾಜ್ಯದಲ್ಲಿ ಪ್ರತಿಭಟನೆ, ರ್ಯಾಲಿ, ಧರಣಿ ಮತ್ತು ಜಾತ್ರೆಗಳಿಗೆ ಬ್ರೇಕ್. 

* ಎಲ್ಲಾ ಸಾರ್ವಜನಿಕ ಪಾರ್ಕ್ ಗಳು ಬಂದ್.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries