HEALTH TIPS

ಕೋವಿಡ್ 3ನೇ ಅಲೆ: ದೇಶದಲ್ಲಿ 3,06,064 ಹೊಸ ಪ್ರಕರಣ ದಾಖಲು, 439 ಸಾವು

     ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,06,064 ಹೊಸ ಕೇಸ್ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 439 ಮಂದಿ ಮೃತಪಟ್ಟಿದ್ದಾರೆ. ಮೊನ್ನೆಗಿಂತ 27 ಸಾವಿರದ 469 ಮಂದಿ ಕಡಿಮೆ ಸೋಂಕಿತರು ವರದಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 3,06,064 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿವೆ. 

     ಸದ್ಯ ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 22 ಲಕ್ಷದ 49 ಸಾವಿರದ 335ರಷ್ಟು ವರದಿಯಾಗಿದೆ. ಪ್ರತಿದಿನ ದಾಖಲಾಗುವ ಕೊರೋನಾ ಸೋಂಕಿತರ ಸಂಖ್ಯೆ ಶೇಕಡಾ 20.75ರಷ್ಟಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 2,43,495 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,68,04,145ಕ್ಕೆ ತಲುಪಿದೆ.

       ಭಾರತದಲ್ಲಿ ನಿನ್ನೆ ಒಂದೇ 14,74,753 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 71.69 ಕೋಟಿ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 162.26 ಕೋಟಿ ಡೋಸ್ ಗಳಷ್ಟು ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

         ದೇಶದಲ್ಲಿ ಓಮಿಕ್ರಾನ್ ಸೋಂಕಿತರು: Omicron ಈಗ ಭಾರತದಲ್ಲಿ ಸಮುದಾಯ ಮಟ್ಟದಲ್ಲಿ ಹರಡುವ ಸ್ಥಿತಿಯಲ್ಲಿದ್ದು, ಮೆಟ್ರೊ ನಗರಗಳಲ್ಲಿ ತೀವ್ರವಾಗಿವೆ. ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ದೇಶದ ಒಟ್ಟು 28 ರಾಜ್ಯಗಳಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ತಿಳಿದುಬಂದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries