ನವದೆಹಲಿ: ಬಹು ನಿರೀಕ್ಷಿತ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆದಗೆ ದಿನಗಣನೆ ಆರಂಭವಾಗಿರುವಂತೆಯೇ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ ತನ್ನ 30 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮುಂಬರುವ ಉತ್ತರ ಪ್ರದೇಶ ಚುನಾವಣೆಯ ಮೊದಲ ಹಂತದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುವ 30 ನಾಯಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇವರಲ್ಲಿ ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಸಂಸದೆ ಹೇಮಾ ಮಾಲಿನಿ ಸೇರಿ ಹಲವು ನಾಯಕರು ಪ್ರಚಾರಕರ ಪಟ್ಟಿಯಲ್ಲಿದ್ದಾರೆ.
ಕೋವಿಡ್ -19 ಪ್ರಕರಣಗಳ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ಚುನಾವಣೆಗೆ ಒಳಪಡುವ ಐದು ರಾಜ್ಯಗಳಲ್ಲಿ ಭೌತಿಕ ರ್ಯಾಲಿಗಳು ಮತ್ತು ರೋಡ್‌ಶೋಗಳ ಮೇಲೆ ನಡೆಯುತ್ತಿರುವ ನಿಷೇಧದ ನಡುವೆ, ಬಿಜೆಪಿ ಈ ರಾಜ್ಯಗಳಲ್ಲಿ ಹೈಬ್ರಿಡ್ ಮೋಡ್‌ನಲ್ಲಿ ರ್ಯಾಲಿಗಳನ್ನು ನಡೆಸಲಿದೆ, ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಹೆಚ್ಚಿನ ಜನರನ್ನು ತಲುಪುವ ನಿರೀಕ್ಷೆ ಇದೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ.
ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಇಂತಿದೆ.