ಬೆಂಗಳೂರು: ಇದೇ ಜನವರಿ 31ರಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದೆ.
ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಂದು ಆರಂಭವಾಗಲಿದ್ದು, ಮೊದಲನೇ ದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಫೆಬ್ರವರಿ ಒಂದರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2022-23ನೇ ಸಾಲಿನ ಕೇಂದ್ರ ಆಯವ್ಯಯ ಮಂಡಿಸಲಿದ್ದಾರೆ. ಜನವರಿ 31ರಿಂದ ಫೆಬ್ರವರಿ 11ರವರೆಗೆ ಹಾಗೂ ಮಾರ್ಚ್ 14 ರಿಂದ ಏಪ್ರಿಲ್ 8ರವರೆಗೆ ಎರಡು ಹಂತದಲ್ಲಿ ಬಜೆಟ್ ಅಧಿವೇಶನದ ಕಲಾಪಗಳು ನಡೆಯಲಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಫೆಬ್ರವರಿ 1 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಲಿದ್ದು, ಅಧಿವೇಶನದ ಮೊದಲ ಭಾಗವು ಫೆಬ್ರವರಿ 11 ರಂದು ಮುಕ್ತಾಯಗೊಳ್ಳಲಿದೆ. ಬಳಿಕ ಒಂದು ತಿಂಗಳ ಅವಧಿಯ ವಿರಾಮದ ನಂತರ, ಅಧಿವೇಶನದ 2ನೇ ಭಾಗ ಮಾರ್ಚ್ 14 ರಿಂದ ಪ್ರಾರಂಭವಾಗಿ ಏಪ್ರಿಲ್ 8 ರಂದು ಮುಕ್ತಾಯಗೊಳ್ಳುತ್ತದೆ.