HEALTH TIPS

ಓಮಿಕ್ರಾನ್ ಏರಿಕೆ: ಸಕ್ರಿಯ ಪ್ರಕರಣಗಳ ಪೈಕಿ ಶೇ.5-10 ಕ್ಕೆ ಆಸ್ಪತ್ರೆಗಳ ಅಗತ್ಯವಿತ್ತು, ಪರಿಸ್ಥಿತಿ ಕ್ಷಿಪ್ರವಾಗಿ ಬದಲಾಗಬಹುದು- ಕೇಂದ್ರ

      ನವದೆಹಲಿ: ಭಾರತದಲ್ಲಿ 24 ಗಂಟೆಗಳ ಅವಧಿಯಲ್ಲಿ 1,79,723 ಕೊರೋನಾ ಪ್ರಕರಣಗಳು 146 ಸಾವು ಸಂಭವಿಸಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು-1,216 ಓಮಿಕ್ರಾನ್ ಪ್ರಕರಣಗಳು ವರದಿಯಾಗುವ ಮೂಲಕ ದೇಶದಲ್ಲಿ ಹೊಸ ರೂಪಾಂತರಿಯ ಸೋಂಕು 4,033 ಕ್ಕೆ ಏರಿಕೆಯಾಗಿದೆ. ರಾಜಸ್ಥಾನದಲ್ಲಿ ಓಮಿಕ್ರಾನ್ ಸಂಖ್ಯೆ 529 ಕ್ಕೆ ಏರಿಕೆಯಾಗಿದ್ದು ದೆಹಲಿಯಲ್ಲಿ 513, ಕರ್ನಾಟಕದಲ್ಲಿ 441, ಕೇರಳದಲ್ಲಿ 333, ಗುಜರಾತ್ ನಲ್ಲಿ 236, ತಮಿಳುನಾಡಿನಲ್ಲಿ 185 ಪ್ರಕರಣಗಳು ಪತ್ತೆಯಾಗಿವೆ.

     ಓಮಿಕ್ರಾನ್ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ದೇಶದ ಹಲವು ಭಾಗಗಳಲ್ಲಿ ಆದ್ಯತೆಯ ಮಂದಿಗೆ ಮೂರನೇ ಡೋಸ್ ಲಸಿಕೆ ನೀಡುವ ಅಭಿಯಾನ ಪ್ರಾರಂಭವಾಗಿದೆ. ಈ ನಡುವೆ ಕೋವಿಡ್-19 ಪರಿಸ್ಥಿತಿಯ ಬಗ್ಗೆ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮಾತನಾಡಿದ್ದು, ಎರಡನೇ ಅಲೆಯಲ್ಲಿ ಸಕ್ರಿಯ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆಯೇ ಶೇ.20-23 ರಷ್ಟು ಪ್ರಕರಣಗಳಿಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವ ಅಗತ್ಯತೆ ಉಂಟಾಗಿತ್ತು. ಈಗ ಮೂರನೇ ಅಲೆಯಲ್ಲಿ ಸಕ್ರಿಯ ಪ್ರಕರಣಗಳ ಪೈಕಿ ಶೇ.5-10 ರಷ್ಟು ಪ್ರಕರಣಗಳಿಗೆ ಆಸ್ಪತ್ರೆಯ ಅಗತ್ಯವಿದೆ. ಇದು ಈವರೆಗಿನ ಚಿತ್ರಣವಾಗಿದ್ದು, ಪರಿಸ್ಥಿತಿ ಕ್ಷಿಪ್ರಗತಿಯಲ್ಲಿ ಬದಲಾಗುವ ಸಾಧ್ಯತೆ ಇದ್ದು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿಯೂ ಬದಲಾವಣೆಯಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಎಂದು ಎಚ್ಚರಿಸಿದ್ದಾರೆ.

        ಪ್ರತಿನಿತ್ಯ ಕೋವಿಡ್-19 ಪರಿಸ್ಥಿತಿ ಹಾಗೂ ಒಟ್ಟು ಸಕ್ರಿಯ ಪ್ರಕರಣಗಳು, ಮನೆಯಲ್ಲಿಯೇ ಐಸೊಲೇಟ್ ಆಗಿರುವ ಪ್ರಕರಾಣಗಳು, ಆಸ್ಪತ್ರೆಗೆ ದಾಖಲಾಗಿರುವ ಪ್ರಕರಣಗಳು, ಆಕ್ಸಿಜನ್ ಬೆಡ್, ಐಸಿಯು ಬೆಡ್, ವೆಂಟಿಲೇಟರ್ ಸಪೋರ್ಟ್ ನಲ್ಲಿರುವ ಪ್ರಕರಣಗಳ ಬಗ್ಗೆ ನಿಗಾ ವಹಿಸಲು ಎಲ್ಲಾ ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಲಾಗಿದೆ. ಸಕ್ರಿಯ ಪ್ರಕರಣಗಳ ಆಧಾರದಲ್ಲಿ ಆರೋಗ್ಯ ಸೇವೆ ಕಾರ್ಯಕರ್ತರು ಅಗತ್ಯತೆ ಹಾಗೂ ಅವರ ಲಭ್ಯತೆಯನ್ನೂ ಪರಿಶೀಲಿಸುವಂತೆ ಕೇಂದ್ರ ಸೂಚನೆ ನೀಡಿದೆ.

        ದೇಶದ ಹಲವು ಭಾಗಗಳಲ್ಲಿ ಕೋವಿಡ್-19 ಪ್ರಕರಣಗಳ ಏರಿಕೆಯೊಂದಿಗೆ ಪಾಸಿಟಿವಿಟಿ ದರವೂ ಏರಿಕೆಯೂ ಕಂಡುಬರುತ್ತಿದೆ. ಡೆಲ್ಟಾ ಸೋಂಕು ಇರುವಿಕೆ ಹಾಗೂ ಓಮಿಕ್ರಾನ್ ಸೋಂಕು ಹೆಚ್ಚಾಗಿ ಹರಡುತ್ತಿರುವುದರ ಪರಿಣಾಮ ಕೋವಿಡ್-19 ಪ್ರಕರಣಗಳಲ್ಲಿಯೂ ಏರಿಕೆ ಕಂಡುಬಂದಿದೆ ಈ ಹಂತದಲ್ಲಿ ಕೋವಿಡ್-19 ಪ್ರಕರಣಗಳ ನಿರ್ವಹಣೆಗೆ ಮಾನವ ಸಂಪನ್ಮೂಲ, ಅದರಲ್ಲಿಯೂ ಪ್ರಮುಖವಾಗಿ ಆರೋಗ್ಯ ಸೇವೆ ಕಾರ್ಯಕರ್ತರು (ಹೆಚ್ ಸಿ ಡಬ್ಲ್ಯು) ಗಳ ಪ್ರಾಮುಖ್ಯತೆ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries