ತಿರುವನಂತಪುರ: ರಾಜ್ಯದಲ್ಲಿ ಇಂದು 51,570 ಮಂದಿಗೆ ಕೋವಿಡ್ ದೃಢಪಟ್ಟಿದೆ. ಎರ್ನಾಕುಳಂ 9704, ತ್ರಿಶೂರ್ 7289, ತಿರುವನಂತಪುರ 5746, ಕೊಟ್ಟಾಯಂ 3889, ಕೋಝಿಕ್ಕೋಡ್ 3872, ಕೊಲ್ಲಂ 3836, ಪಾಲಕ್ಕಾಡ್ 3412, ಆಲಪ್ಪುಳ 2861, ಮಲಪ್ಪುರಂ 2796, ಪತ್ತನಂತಿಟ್ಟ 2517, ಕಣ್ಣೂರು 1976, ಇಡುಕ್ಕಿ 1565, ವಯನಾಡ್ 1338, ಕಾಸರಗೋಡು 769 ಎಂಬಂತೆ ಸೋಂಕು ಬಾಧಿಸಿದೆ.
ಕಳೆದ 24 ಗಂಟೆಗಳಲ್ಲಿ 1,03,366 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 5,27,362 ಮಂದಿ ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 5,14,734 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದಾರೆ ಮತ್ತು 12,628 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ. 1259 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ 3,54,595 ಕರೋನಾ ಪ್ರಕರಣಗಳಲ್ಲಿ, ಕೇವಲ 3.4 ಪ್ರತಿಶತದಷ್ಟು ಜನರು ಆಸ್ಪತ್ರೆ / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 14 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ ಎಂದು ದೃಢಪಟ್ಟಿದೆ. ಇದಲ್ಲದೆ, ಹಿಂದಿನ ದಿನಗಳಲ್ಲಿ ದಾಖಲೆಗಳ ವಿಳಂಬದಿಂದ 87 ಸಾವುಗಳು ಮತ್ತು ಸುಪ್ರೀಂ ಕೋರ್ಟ್‌ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ್ದರಿಂದ 374 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 53,666ಕ್ಕೆ ಏರಿಕೆಯಾಗಿದೆ.
ಇಂದು,ಸೋಂಕು ಪತ್ತೆಯಾದವರಲ್ಲಿ 177 ಮಂದಿ ಜನರು ಹೊರ ರಾಜ್ಯದವರು. 47,776 ಮಂದಿ ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 3178 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಇಂದು 439 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ದೃಢಪಟ್ಟಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದವರಲ್ಲಿ 32,701 ಮಂದಿ ಚೇತರಿಸಿಕೊಂಡಿದ್ದಾರೆ. ತಿರುವನಂತಪುರ 7461, ಕೊಲ್ಲಂ 1278, ಪತ್ತನಂತಿಟ್ಟ 3343, ಆಲಪ್ಪುಳ 2018, ಕೊಟ್ಟಾಯಂ 2425, ಇಡುಕ್ಕಿ 1361, ಎರ್ನಾಕುಳಂ 1382, ತ್ರಿಶೂರ್ 1012, ಪಾಲಕ್ಕಾಡ್ 2489, ಮಲಪ್ಪುರಂ 1131, ಕೋಝಿಕ್ಕೋಡ್ 5562, ವಯನಾಡ್ 964, ಕಾಸರಗೋಡು 547 ಎಂಬಂತೆ ಗುಣಮುಖರಾಗಿದ್ದಾರೆ.