ತಿರುವನಂತಪುರ: ರಾಜ್ಯದಲ್ಲಿ ಇಂದು ಹಠಾತ್ ಆಗಿ ಕೋವಿಡ್ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು, 9066 ಮಂದಿಗೆ ಸೋಂಕು ದೃಢಪಟ್ಟಿದೆ. ತಿರುವನಂತಪುರ 2200, ಎರ್ನಾಕುಳಂ 1478, ತ್ರಿಶೂರ್ 943, ಕೋಝಿಕ್ಕೋಡ್ 801, ಕೊಟ್ಟಾಯಂ 587, ಕೊಲ್ಲಂ 551, ಪಾಲಕ್ಕಾಡ್ 511, ಕಣ್ಣೂರು 417, ಪತ್ತನಂತಿಟ್ಟ 410, ಆಲಪ್ಪುಳ 347, ಮಲಪ್ಪುರಂ 347, ಮಲಪ್ಪುರಂ 309, ಇಡುಕ್ಕಿ 239, ವಯನಾಡ್ 155, ಕಾಸರಗೋಡು 118 ಎಂಬಂತೆ ದೃಢಪಡಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 63,898 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ಸಾಪ್ತಾಹಿಕ ಸೋಂಕಿನ ಜನಸಂಖ್ಯೆಯ ಅನುಪಾತ 10 ಕ್ಕಿಂತ ಹೆಚ್ಚಿನ 5 ಸ್ಥಳೀಯಾಡಳಿತ ಪ್ರದೇಶಗಳಲ್ಲಿ 6 ವಾರ್ಡ್ಗಳಿವೆ. ಇಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಇರಲಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 1,27,790 ಮಂದಿ ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 1,24,903 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ ಮತ್ತು 2,887 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ. ಒಟ್ಟು 298 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ, 44,441 ಕೊರೋನಾ ಪ್ರಕರಣಗಳಲ್ಲಿ, ಕೇವಲ 5.7 ಪ್ರತಿಶತದಷ್ಟು ಜನರು ಆಸ್ಪತ್ರೆ / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್ ಬಾಧಿಸಿ 19 ಮಂದಿ ಮೃತರಾಗಿದ್ದಾರೆ. ಇದಲ್ಲದೆ, ಸುಪ್ರೀಂ ಕೋರ್ಟ್ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ 277 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 50,053ಕ್ಕೆ ಏರಿಕೆಯಾಗಿದೆ.
ಇಂದು, ಸೋಂಕು ಪತ್ತೆಯಾದವರಲ್ಲಿ 127 ಮಂದಿ ಜನರು ಹೊರ ರಾಜ್ಯದವರು. 8198 ಮಂದಿ ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 628 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. 113 ಮಂದಿ ಆರೋಗ್ಯ ಕಾರ್ಯಕರ್ತರಿಗೂ ಇಂದು ಕೋವಿಡ್ ದೃಢಪಟ್ಟಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 2064 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 177, ಕೊಲ್ಲಂ 98, ಪತ್ತನಂತಿಟ್ಟ 247, ಆಲಪ್ಪುಳ 111, ಕೊಟ್ಟಾಯಂ 37, ಇಡುಕ್ಕಿ 82, ಎರ್ನಾಕುಳಂ 508, ತ್ರಿಶೂರ್ 42, ಪಾಲಕ್ಕಾಡ್ 43, ಮಲಪ್ಪುರಂ 103, ಕೋಯಿಕ್ಕೋಡ್ 299, ವಯನಾಡ್ 114, ಕಣ್ಣೂರು 158, ಕಾಸರಗೋಡು 45 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ 44,441 ಮಂದಿಗೆ ಸೋಂಕು ದೃಢಪಟ್ಟಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 52,05,210 ಮಂದಿ ಕೊರೋನಾದಿಂದ ಮುಕ್ತರಾಗಿದ್ದಾರೆ.