ನವದೆಹಲಿ: ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಬಿಜೆಪಿ ಶಾಸಕ ವಿಜಯ್ ರಹಂಗ್‌ಡೇಲ್ ಅವರ ಪುತ್ರ ಆವಿಷ್ಕರ್ ರಹಂಗ್‌ಡೇಲ್ ಸೇರಿದಂತೆ ಏಳು ಮಂದಿ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ನವದೆಹಲಿ: ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಬಿಜೆಪಿ ಶಾಸಕ ವಿಜಯ್ ರಹಂಗ್‌ಡೇಲ್ ಅವರ ಪುತ್ರ ಆವಿಷ್ಕರ್ ರಹಂಗ್‌ಡೇಲ್ ಸೇರಿದಂತೆ ಏಳು ಮಂದಿ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಸೆಲ್ಸುರಾ ಗ್ರಾಮದ ಬಳಿ ದಿಯೋಲಿಯಿಂದ ವಾರ್ಧಾ ಕಡೆಗೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ನೇರವಾಗಿ ಕೆಳಗೆ ಬಿದ್ದಿದೆ.
ಮೃತರನ್ನು ನೀರಜ್ ಚೌಹಾಣ್, ನಿತೇಶ್ ಸಿಂಗ್, ವಿವೇಕ್ ನಂದನ್, ಪ್ರತ್ಯೂಷ್ ಸಿಂಗ್, ಶುಭಂ ಜೈಸ್ವಾಲ್, ಪವನ್ ಶಕ್ತಿ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳು ವಾರ್ಧಾದ ಸಾವಂಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಪ್ರಧಾನಿ ಸಂತಾಪ: ಕಾರು ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಕ್ಕಾಗಿ ತಲಾ ₹ 2 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಈ ಕುರಿತು ಪ್ರಧಾನ ಮಂತ್ರಿಗಳ ಕಚೇರಿಯು ಟ್ವೀಟ್ ಮಾಡಿದೆ.