ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ, ಸದನದಲ್ಲಿ ಇದುವರೆಗೆ ಒಟ್ಟು 875 ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ಬಂದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಅಧಿಕೃತ ಮೂಲಗಳ ಪ್ರಕಾರ, ಜನವರಿ 20ರವರೆಗೆ 2,847 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಅದರಲ್ಲಿ 875 ಸಂಸದೀಯ ಸಿಬ್ಬಂದಿ ಪಾಸಿಟಿವ್ ಬಂದಿದೆ.
ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರಿಗೆ ಹೈದರಾಬಾದ್‌ನಲ್ಲಿ ಕೋವಿಡ್ 19 ಪರೀಕ್ಷೆ ನಡೆಸಲಾಗಿದ್ದು ಅವರಿಗೆ ಕೊರೋನಾ ವಕ್ಕರಿಸಿದೆ. ಇನ್ನು ಅವರು ಹೋಂ ಐಸೋಲೇಷನ್ ಗೆ ಒಳಗಾಗಿದ್ದಾರೆ.