ತಿರುವನಂತಪುರ: ದರ ಏರಿಕೆಗೆ ಆಗ್ರಹಿಸಿ ರಾಜ್ಯದಲ್ಲಿ ಖಾಸಗಿ ಬಸ್‌ಗಳು ಮುಷ್ಕರ ನಡೆಸಲು ಚಿಂತನೆ ನಡೆಸಿವೆ. ಇನ್ನೆರಡು ದಿನಗಳಲ್ಲಿ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳದಿದ್ದರೆ ಮುಷ್ಕರ ನಡೆಸುವುದಾಗಿ ಬಸ್ ಮಾಲಕರ ಸಂಘಟನೆ ತಿಳಿಸಿದೆ.
ವರದಿಗಳ ಪ್ರಕಾರ ಫೆಬ್ರುವರಿ ಮೊದಲ ವಾರದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ದರ ಏರಿಕೆ ಕುರಿತು ಯಾವುದೇ ನಿರ್ಧಾರ ಕೈಗೊಳ್ಳದಿದ್ದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ.