ಕೋಲ್ಕತಾ: ತಮಗೆ ಘೋಷಣೆಯಾಗಿರುವ ಪದ್ಮಭೂಷಣ ಪ್ರಶಸ್ತಿಯನ್ನು ತಾವು ಸ್ವೀಕರಿಸುವುದಿಲ್ಲ ಎಂದು ಪಶ್ಚಿಮಬಂಗಾಳ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಹೇಳಿದ್ದಾರೆ.
ಮಂಗಳವಾರ ಪ್ರಕಟವಾದ ಪದ್ಮ ಪ್ರಶಸ್ತಿ ಪಟ್ಟಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಝಾದ್ ಹಾಗು ಸಿಪಿಎಂ ಹಿರಿಯ ನಾಯಕ, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು.
ಇದೀಗ ಈ ಪ್ರಶಸ್ತಿ ಕುರಿತು ಹೇಳಿಕೆ ನೀಡಿರುವ ಬುದ್ಧದೇವ್ ಭಟ್ಟಾಚಾರ್ಯ ಅವರು, 'ಪದ್ಮಭೂಷಣ ಪ್ರಶಸ್ತಿಗೆ ಹೆಸರಿಸಿರುವುದು ತನಗೆ ತಿಳಿದಿಲ್ಲ ಮತ್ತು ಹಾಗಾಗಿ ಅದನ್ನು ತಿರಸ್ಕರಿಸುತ್ತೇನೆ ಎಂದು ಹೇಳಿದ್ದಾರೆ.
ನನಗೆ ಪದ್ಮಭೂಷಣ ಪ್ರಶಸ್ತಿಯ ಬಗ್ಗೆ ಏನೂ ತಿಳಿದಿಲ್ಲ, ಯಾರೂ ಅದರ ಬಗ್ಗೆ ನನಗೆ ಏನನ್ನೂ ಹೇಳಲಿಲ್ಲ. ಅವರು ನನಗೆ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿದ್ದರೆ, ನಾನು ಅದನ್ನು ತಿರಸ್ಕರಿಸುತ್ತಿದ್ದೇನೆ" ಎಂದು ಅವರು ತಮ್ಮ ಪಕ್ಷದ ಸಿಪಿಎಂನಲ್ಲಿ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಭಾರತದ ಉನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿರುವ ಪದ್ಮಭೂಷಣ ಪ್ರಶಸ್ತಿಯನ್ನು ತಿರಸ್ಕರಿಸಿದ ಅಪರೂಪದ ನಿದರ್ಶನದಲ್ಲಿ.ಇದೂ ಒಂದಾಗಿದೆ.