HEALTH TIPS

ಅಯೋಧ್ಯೆಯಲ್ಲಿ ಶಂಕರಾಚಾರ್ಯರ ಮಂದಿರ: ಪ್ರಸ್ತಾವನೆ

          ನವದೆಹಲಿ: ಮೈಸೂರು ಜಿಲ್ಲೆಯ ಕೃಷ್ಣರಾಜನಗರದ ಯಡತೊರೆಯ ಶ್ರೀ ಯೋಗಾನಂದೇಶ್ವರ ಸರಸ್ವತೀ ಮಠದ ಶ್ರೀ ಶಂಕರಭಾರತೀ ಸ್ವಾಮೀಜಿ ನೇತೃತ್ವದ ನಿಯೋಗವು ಶನಿವಾರ ಇಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸಿತು.

          ಅಯೋಧ್ಯೆಯ ರಾಮಜನ್ಮ ಭೂಮಿ ಪ್ರದೇಶದ ಬಳಿ ಆದಿ ಶಂಕರಾಚಾರ್ಯರ ಮಂದಿರ ನಿರ್ಮಾಣದ ಅಗತ್ಯವನ್ನು ಪ್ರಧಾನಿ ಜೊತೆ ಚರ್ಚಿಸಲಾಯಿತು ಎಂದು ಶ್ರೀ ಶಂಕರಭಾರತೀ ಸ್ವಾಮೀಜಿ ಅವರು ಭೇಟಿ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

            ಅಲ್ಲದೆ, ಅಯೋಧ್ಯೆಯಲ್ಲಿ ಅದ್ವೈತ ಮತ್ತು ಭಾರತೀಯ ತತ್ವಶಾಸ್ತ್ರ ಕುರಿತ ಅಧ್ಯಯನ ಪೀಠ ಹಾಗೂ ಸಂಶೋಧನಾ ಸಂಸ್ಥೆ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಲಾಯಿತು. ಈ ಸಂಬಂಧ ಅಯೋಧ್ಯೆಯ ಸರಯೂ ನದಿ ದಂಡೆಯಲ್ಲಿ 15 ಎಕರೆ ಜಮೀನನ್ನು ಮಂಜೂರು ಮಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries