ಸಹರನ್ ಪುರ: ಕಾರನ್ನು ಓವರ್ ಟೇಕ್ ಮಾಡಿದ್ದಕ್ಕಾಗಿ ಪತ್ರಕರ್ತನನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಸಹರನ್ ಪುರದಲ್ಲಿ ಈ ಘಟನೆ ನಡೆದಿದ್ದು, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಪತ್ರಕರ್ತ ಮೂರು ಮಂದಿ ಪ್ರಯಾಣಿಸುತ್ತಿದ್ದ ಕಾರನ್ನು ಓವರ್ ಟೇಕ್ ಮಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ಮಂದಿ, ಪತ್ರಕರ್ತನನ್ನು ನಿಲ್ಲಿಸಿ ಥಳಿಸಿದ್ದಾರೆ.
ಚಿಲ್ಕಾನದ ನಿವಾಸಿಯಾಗಿರುವ ಸಂತ್ರಸ್ತ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದರು. ಆತ ತನ್ನ ದ್ವಿ ಚಕ್ರವಾಹನದಲ್ಲಿ ಸಹರನ್ ಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಆಲ್ಟೋ ಕಾರನ್ನು ಹಿಂದಿಕ್ಕಿದ್ದರು. ಓವರ್ ಟೇಕ್ ಮಾಡಿದ್ದಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿ ಘರ್ಷಣೆ ಉಂಟಾಗಿತ್ತು. ಮೂರು ಮಂದಿ ಪತ್ರಕರ್ತನ ಮೇಲೆ ಮಾರಣಾಂತಿಕ ಪ್ರಹಾರ ಮಾಡಿದ್ದಾರೆ" ಎಂದು ಎಸ್ ಪಿ ರಾಜೇಶ್ ಕುಮಾರ್ ಹೇಳಿದ್ದಾರೆ. ಸಂತ್ರಸ್ತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ.