ನವದೆಹಲಿ: ಕೋವಿಡ್-19 ಸಂಬಂಧ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಓಮಿಕ್ರಾನ್ ಉಪ ರೂಪಾಂತರಿ ಭಾರತದಲ್ಲಿ ಹೆಚ್ಚು ಪ್ರಚಲಿತವಾಗಿದೆ ಎಂದು ಹೇಳಿದೆ.
"ಓಮಿಕ್ರಾನ್ ಉಪ ರೂಪಾಂತರಿ ಬಿಎ.2 ಆಗಿದ್ದು ಜ.27 ವರೆಗಿನ ಮಾಹಿತಿಯ ಪ್ರಕಾರ ಭಾರತದಲ್ಲಿ ಈ ವರೆಗೂ 22,02,472 ಸಕ್ರಿಯ ಪ್ರಕರಣಗಳು ಇವೆ. ಕಳೆದ ವಾರದಲ್ಲಿ ಪಾಸಿಟಿವಿಟಿ ದರ ಶೇ.17.5 ರಷ್ಟಿದೆ 11 ರಾಜ್ಯಗಳಲ್ಲಿ 50,000 ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರ, ಕರ್ನಾಟಕ, ಕೇರಳಗಳಲ್ಲಿ 3 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ" ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ
ಶೇ.95 ರಷ್ಟು ಮೊದಲ ಡೋಸ್ ಲಸಿಕೆ ಹಾಗೂ ಶೇ.74 ರಷ್ಟು ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದ ಜನಸಂಖ್ಯೆಯ ಪೈಕಿ 97.03 ಲಕ್ಷ ಅರ್ಹ ಜನಸಂಖ್ಯೆಗೆ ಮುನ್ನೆಚ್ಚರಿಕಾ ಡೋಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.