ಕಾಸರಗೋಡು: ಒಮಿಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಗುರುವಾರ ರಾತ್ರಿ ಕಫ್ರ್ಯೂ ಆರಂಭಗೊಂಡಿದ್ದು, ಆದೇಶ ಉಲ್ಲಂಘಿಸಿದವರ ವಿರುದ್ಧ ಕಾಸರಗೋಡು ಜಿಲ್ಲಾದ್ಯಂತ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
ರಾತ್ರಿ 10ರಿಂದ ಬೆಳಗ್ಗೆ 5ರ ವರೆಗೆ ಕಪ್ರ್ಯೂ ಜಾರಿಯಲ್ಲಿರಲಿದ್ದು, ಈ ಆದೇಶ ಉಲ್ಲಂಘಿಸಿದ ಹಲವರನ್ನು ಬಂಧಿಸಿ, ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿದ್ಯಾನಗರ ಸೇರಿದಂತೆ ವಿವಿಧ ಠಾಣೆ ವ್ಯಾಪ್ತಿಗಳಿಂದ ಹಲವರನ್ನು ಬಂಧಿಸಲಾಗಿದ್ದು, ಇವರಲ್ಲಿ ಇತರ ರಾಜ್ಯಗಳ ಕಾರ್ಮಿಕರೂ ಒಳಗೊಂಡಿದ್ದಾರೆ.ಕಾಸರಗೋಡು ಸಬ್‍ಡಿವಿಶನ್ ವ್ಯಾಪ್ತಿಯಲ್ಲಿ ಒಟ್ಟು 25 ಹಾಗೂ ಕಾಞಂಗಾಡು ಸಬ್‍ಡಿವಿಶನ್‍ನಿಂದ 24ಮಂದಿಯನ್ನು ಬಂಧಿಸಲಾಗಿದೆ. ಹಲವು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನಂತರ ದಂಡ ವಸೂಲಿಮಾಡಿ ಬಿಡುಗಡೆಗೊಳಿಸಲಾಗಿದೆ. ರಾತ್ರಿ 10ರಿಂದ ಬೆಳಗ್ಗೆ 5ರ ವರೆಗೆ ನಡೆಯುವ ಕಾರ್ಯಕ್ರಮಗಳನ್ನು ಸಂಪೂರ್ಣ ಕೈಬಿಡುವಂತೆ ಪೊಲೀಸರು ಸೂಚಿಸಿದ್ದಾರೆ.
ಚಿತ್ರ:ಶ್ರೀಕಾಂತ್. ಕಾಸರಗೋಡು