ಕಾಸರಗೋಡು: ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯಲ್ಲಿ ಲೋಪವೆಸಗಿದ ಪಂಜಾಬ್‍ನ ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ ಎಸ್‍ಸಿ ಮೋರ್ಚಾ ಜಿಲ್ಲಾ ವತಿಯಿಂದ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಎದುರು ಮೌನ ಪ್ರತಿಭಟನೆ ಸೋಮವಾರ ಜರುಗಿತು.
ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ಉಪಾಧ್ಯಕ್ಷ ರಾಮಪ್ಪ ಮಂಜೇಶ್ವರ, ಎಸ್‍ಸಿ ಮೋರ್ಚಾ ರಾಜ್ಯ ಸಮಿತಿ ಉಪಾಧ್ಯಕ್ಷ ಎ.ಕೆ ಕಯ್ಯಾರ್, ರಾಜ್ಯ ಸಮಿತಿ ಸದಸ್ಯೆ ಬಿ. ಸೌದಾಮಿನಿ, ಎಸ್.ಸಿ ಮೋರ್ಚಾ ಕಾಸರಗೋಡು ಜಿಲ್ಲಾಸಮಿತಿ ಅಧ್ಯಕ್ಷ ಸಂಪತ್ ಕುಮಾರ್, ಬಿಜೆಪಿ ಜಿಲ್ಲಾ ಸಮಿತಿ ಕಾರ್ಯದರ್ಶಿ ಉಮಾ ಕಡಪ್ಪುರ, ಎಸ್‍ಟಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿಗಳಾದ ನಾರಾಯಣ ಪೆರಡಾಲ, ಹರೀಶ್ ಕೆದುಂಬಾಡಿ, ಸುಂದರ ಮವ್ವಾರ್ ಮುಂತಾದವರು ನೇತೃತ್ವ ನೀಡಿದರು.