ಕಾಸರಗೋಡು: ಕೈಗಾರಿಕೆ, ಕಾನೂನು ಹಾಗೂ ಹುರಿಹಗ್ಗ ಖಾತೆ ಸಚಿವ ಪಿ.ರಾಜೀವ್ ಜ. 11ರಂದು ಕಾಸರಗೋಡಿಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲಬಾರಿಗೆ ಕಾಸರಗೋಡು ಭೇಟಿ ನೀಡುತ್ತಿದ್ದಾರೆ.
ಬೆಳಗ್ಗೆ 10ಕ್ಕೆ ಕಾಸರಗೋಡು ನಗರಸಭಾಂಗಣದಲ್ಲಿ ನಡೆಯುವ ಮೀಟ್ ದ ಮಿನಿಸ್ಟರ್ ಕಾರ್ಯಕ್ರಮದಲ್ಲಿ ಕೈಗಾರಿಕಾ ವಲಯ, ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಮಾಲೋಚನೆ ಹಾಗೂ ಅಹವಾಲು ಸ್ವೀಕಾರ ನಡೆಯುವುದು. ಜಿಲ್ಲೆಯ ಶಾಸಕರೊಂದಿಗೆ ಸಮಾಲೋಚನೆ ನಡೆಯುವುದು. ಮಧ್ಯಾಹ್ನ ಬೆದ್ರಡ್ಕದ ಭೆಲ್-ಇಎಂಎಲ್ ಸಂಸ್ಥೆಗೆ ಭೇಟಿ ನೀಡಲಿದ್ದಾರೆ. ಸಂಜೆ ಕಾಸರಗೋಡಿನಲ್ಲಿ ನಡೆಯುವ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳುವರು.