ನವದೆಹಲಿ: ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಬಯೋಮೆಟ್ರಿಕ್ ಹಾಜರಾತಿಗೆ ಕೇಂದ್ರ ಸರ್ಕಾರ ತಡೆ ನೀಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜೀತೇಂದ್ರ ಸಿಂಗ್, ಕಳೆದ ಕೆಲವು ದಿನಗಳಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ಮೇಲೆ ಕಡಿವಾಣ ಹಾಕುವ ಸಂಬಂಧ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ಟ್ವೀಟ್ ಮಾಡುವ ಮೂಲಕ ಸೂಚನೆ ನೀಡಿರುವ ಸಚಿವರು, ಕಳೆದ ಕೆಲವು ದಿನಗಳಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ಗಮನದಲ್ಲಿಟ್ಟುಕೊಂಡು ಮುಂದಿನ ಆದೇಶದವರೆಗೆ ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ.
ಪ್ರಧಾನಿ ಮೋದಿ ನಾಯಕತ್ವದಲ್ಲಿ ಸರ್ಕಾರಿ ಉದ್ಯೋಗಿಗಳ ಆರೋಗ್ಯದ ದೃಷ್ಟಿಯಿಂದ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.