ಕಾಸರಗೋಡು: ಸನಾತನ ಸಂಸ್ಕøತಿ, ಆಚಾರ, ವಿಚಾರಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವ ಸಮೂಹದ ಮೇಲಿದೆ. ಇಂದಿನ ಯುವ ಜನತೆ ಪಾಶ್ಚಿಮಾತ್ಯ ಸಂಸ್ಕøತಿಗೆ ಮಾರು ಹೋಗಿದ್ದು, ಅದರ ಬದಲು ಧಾರ್ಮಿಕ ಮನೋಭಾವನೆಗಳನ್ನು ಬೆಳೆಸಿಕೊಳ್ಳಬೇಕು. ಭಾರತೀಯ ಸಂಸ್ಕøತಿಯನ್ನು ಮೈಗೂಡಿಸಿಕೊಂಡು ಗುರುವಿನ ಮಾರ್ಗದರ್ಶನದಲ್ಲಿ ಮುನ್ನಡೆದರೆ ಬಾಳು ಹಸನವಾಗುತ್ತದೆ ಎಂದು ಕೆ.ಸಿ.ರೋಡ್ ಶಾರದಾ ಆಯುರ್ವೇದ ಕಾಲೇಜಿನ ಪಂಚಕರ್ಮ ವಿಭಾಗದ ಪ್ರಾಧ್ಯಾಪಕ ಮತ್ತು ತಜ್ಞ ವೈದ್ಯ ಡಾ.ಸಂದೀಪ್ ಬೇಕಲ್ ಅವರು ಹೇಳಿದರು.
ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಸೇವಾ ಸಂಘ ಕಾಸರಗೋಡು ಅಣಂಗೂರು ಉಪಸಂಘ ಹಾಗು ಲಕ್ಷ್ಮಣಾನಂದ ಸರಸ್ವತಿ ಮಹಿಳಾ ಭಜನಾ ವೃಂದದ 11 ನೇ ವಾರ್ಷಿಕೋತ್ಸವ ಮತ್ತು ಮಹಾಸಭೆಯನ್ನು ಅಣಂಗೂರಿನ ಶುಭಜಯದ ದಿ.ಸುಬ್ರಾಯ ಅಣಂಗೂರು ವೇದಿಕೆಯಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.
ಅಣಂಗೂರು ಉಪಸಂಘದ ಅಧ್ಯಕ್ಷ ಕೆ.ಕಮಲಾಕ್ಷ ಅಣಂಗೂರು ಅಧ್ಯಕ್ಷತೆ ವಹಿಸಿದ್ದರು. ಲ್ಯಾಂಡ್ ರೆವೆನ್ಯೂ ಇಲಾಖೆಯ ಸೀನಿಯರ್ ಕ್ಲರ್ಕ್ ಸುನೀತ ಹರೀಶ್ ನಾಗರಕಟ್ಟೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭಹಾರೈಸಿದರು. ಜಿಲ್ಲಾ ಸಂಘದ ಅಧ್ಯಕ್ಷ ಕಮಲಾಕ್ಷ ಕಲ್ಲುಗದ್ದೆ, ಜಿಲ್ಲಾ ಮಹಿಳಾ ಸಂಘದ ಅಧ್ಯಕ್ಷೆ ಉಷಾ ನವೀನ್‍ಚಂದ್ರ, ಲಕ್ಷ್ಮಣಾನಂದ ಸರಸ್ವತಿ ಮಹಿಳಾ ಭಜನಾ ವೃಂದದ ಗೌರವಾಧ್ಯಕ್ಷೆ ಆಶಾ ರಾಧಾಕೃಷ್ಣ, ಲಕ್ಷ್ಮಣಾನಂದ ಸ್ವಸಹಾಯ ಸಂಘದ ನಳಿನಾಕ್ಷ ಮೊದಲಾದವರು ಉಪಸ್ಥಿತರಿದ್ದು ಶುಭಾಶಂಸನೆಗೈದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದನೆ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಣೆ, ಹಿರಿಯ ದಂಪತಿಗಳಿಗೆ ಗೌರವಾರ್ಪಣೆ ನಡೆಯಿತು. ಜೋಗೇಂದ್ರನಾಥ್ ಸ್ವಾಗತಿಸಿ, ಲಕ್ಷ್ಮಣಾನಂದ ಸ್ವಸಹಾಯ ಸಂಘದ ಸದಸ್ಯ ಬಿ.ವೆಂಕಟೇಶ್ ವಂದಿಸಿದರು. ಬಬಿತಾ ಸಂತೋಷ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸಾಂಸ್ಕøತಿಕ ಕಾರ್ಯಕ್ರಮ ಜರಗಿತು.