ಜಿನೇವಾ: ಜಗತ್ತಿನಾದ್ಯಂತ ಜನರ ನಡುವೆ ದ್ವೇಷ ಭಾವನೆ ಹೆಚ್ಚುತ್ತಿದೆ. ಕೊರೊನಾದಿಂದಾಗಿ ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆ ಮೇಲೆ ಕೆಟ್ಟ ಪರಿಣಾಮ ಉಂಟಾಗಿದ್ದು ದ್ವೇಷ ಭಾವನೆ ಹರಡುತ್ತಿದೆ ಎಂದು ವಿಶ್ವಸಂಸ್ಥೆ ಮಾನವಹಕ್ಕುಗಳ ಹೈಕಮೀಷನರ್ ಅಭಿಪ್ರಾಯಪಟ್ಟಿದ್ದಾರೆ.
ಸಾಮಾಜಿಕ ಜಾಲತಾಣಗಳು ಜನರಲ್ಲಿ ದ್ವೇಷ ಭಾವನೆ ಹೆಚ್ಚಿಸುವ ಕೆಲಸ ಮಾಡುತ್ತಿದ್ದು, ಅವುಗಳನ್ನು ನಿಯಂತ್ರಣಕ್ಕೊಳಪಡಿಸುವ ಕೆಲಸವಾಗಬೇಕಿದೆ ಎಂದು ಅಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ.
ಅಂತರ್ಜಾಲ, ಸಾಮಾಜಿಕ ಜಾಲತಾಣಗಳನ್ನು ನಿಯಂತ್ರಣಕ್ಕೊಳಪಡಿಸುವ ಸಮಯದಲ್ಲಿ ಅಸಲಿ ಜನಾಭಿಪ್ರಾಯಗಳನ್ನು ಗೌರವಿಸುವ ಕೆಲಸವೂ ಆಗಬೇಕು. ಸಾಮಾಜಿಕ ವ್ಯವಸ್ಥೆಯ ಮೌಲ್ಯಗಳನ್ನು ಸಾಮಾಜಿಕ ಜಾಲತಾಣಗಳೂ ಎತ್ತಿಹಿಡಿಯಬೇಕೆಂದೂ ಅಧಿಕಾರಿಗಳು ಹೇಳಿದ್ದಾರೆ.