ಕುಂಬಳೆ: ಕಥೆಗಾರ್ತಿ ಸ್ನೇಹಲತಾ ದಿವಾಕರ್ ಅವರ ಕಥಾಸಂಕಲ "ಆಮೆ" ಕುಂಬಳೆಯ ಮಾಧವ ಪೈ ಸ್ಮಾರಕ ಸಭಾಭವನದಲ್ಲಿ ಸೋಮವಾರ ಬಿಡುಗಡೆಗೊಂಡಿತು. ಕೈರಳಿ ಪ್ರಕಾಶನ ಸುಬ್ಬಯ್ಯಕಟ್ಟೆ ವತಿಯಿಂದ ನಡೆದ ಸಮಾರಂಭದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್.ನಂದೀಶ್ ಹಂಜೆ ಕಥಾಸಂಕಲವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭ ಮಾತನಾಡಿದ ಅವರು ವೈಚಾರಿಕ ಚಿಂತನೆಗೆ ಹಚ್ಚುವ ವಸ್ತುವಿನ ಸುತ್ತ ಹೆಣೆಯಲ್ಪಡುವ ಕಥಾನಕಗಳು ವ್ಯಕ್ತಿ-ವ್ಯಕ್ತಿತ್ವವನ್ನು ಬದಲಾಯಿಸುವ ಶಕ್ತಿ ಹೊಂದಿದೆ. ಅಂತಹ ಕಥೆಗಳಿಂದ ಹೊಸ ಜಗತ್ತು ಸೃಷ್ಟಿಯಾಗುತ್ತದೆ. ಹೊಸ ಸೃಷ್ಟಿಗೆ ಕಾರಣವಾಗುವ ಬರಹಗಳು ಸಮಾಜವನ್ನು ಮುನ್ನಡೆಸುತ್ತದೆ ಎಂದು ತಿಳಿಸಿದರು. ಪ್ರಾಧಿಕಾರದ ಮೂಲಕ ಉತ್ತಮ ಬರಹಗಾರನ್ನು ಪ್ರೋತ್ಸಾಹಿಸುವ ಎಲ್ಲಾ ಭರವಸೆಗಳನ್ನು ಅವರು ನೀಡಿದರು.
ಕೈರಳಿ ಪ್ರಕಾಶನದ ಗೌರವಾಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಸರ್ಕಾರಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ರತ್ನಾಕರ ಮಲ್ಲಮೂಲೆ ಕೃತಿ ಪರಿಚಯ ನಡೆಸಿದರು. ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಟಿ.ಎ.ಎನ್.ಖಂಡಿಗೆ, ಕುಂಬಳೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ನಾಸರ್ ಮೊಗ್ರಾಲ್, ವಿಶ್ರಾಂತ ಪ್ರಾಧ್ಯಾಪಕಿ ಡಾ.ಪ್ರಮೀಳಾ ಮಾಧವ್, ಗಡಿನಾಡ ಅಕಾಡೆಮಿ ಕಾಸರಗೋಡು ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಕಲ್ಲೂರಾಯ ಬನದಗದ್ದೆ, ಕಾಸರಗೋಡು ಥಿಯೇಟ್ರಿಕ್ಸ್ ಸೊಸೈಟಿಯ ಕೋಶಾಧಿಕಾರಿ ನ್ಯಾಯವಾದಿ ಟಿ.ವಿ.ಗಂಗಾಧರನ್, ಕ್ಯಾಂಪೆÇ್ಕೀ ಮಂಗಳೂರು ಮಾಜಿ ಅಧ್ಯಕ್ಷ ಕೋಳಾರು ಸತೀಶ್ಚಂದ್ರ ಭಂಡಾರಿ, ಕಾಸರಗೋಡು ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಅಧ್ಯಕ್ಷ ಚನಿಯಪ್ಪ ನಾಯ್ಕ್ ಎನ್., ಕಾಸರಗೋಡು ಜಿಲ್ಲಾ ಕನ್ನಡ ಪತ್ರಕತ್ರರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಗಂಗಾಧರ ತೆಕ್ಕೆಮೂಲೆ ಉಪಸ್ಥಿತರಿದ್ದರು.
ಸ್ನೇಹಲತಾ ದಿವಾಕರ್ ಸ್ವಾಗತಿಸಿ, ಅಖಿಲೇಶ್ ನಗುಮುಗಂ ವಂದಿಸಿದರು. ರವಿ ನಾಯ್ಕಾಪು ಕಾರ್ಯಕ್ರಮ ನಿರೂಪಿಸಿದರು.