ಪಣಜಿ: ಬಿಜೆಪಿ ತೊರೆದಿರುವ ಗೋವಾ ಮಾಜಿ ಮುಖ್ಯಮಂತ್ರಿ ಲಕ್ಷ್ಮಿಕಾಂತ್ ಪರ್ಸೇಕರ್ ಅವರು ವಿಧಾನಸಭೆ ಚುನಾವಣೆಯಲ್ಲಿ ಮಾಂಡ್ರೆಮ್ ಕ್ಷೇತ್ರದಿಂದ ಪಕ್ಷೇತರರಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.
ಪಣಜಿ: ಬಿಜೆಪಿ ತೊರೆದಿರುವ ಗೋವಾ ಮಾಜಿ ಮುಖ್ಯಮಂತ್ರಿ ಲಕ್ಷ್ಮಿಕಾಂತ್ ಪರ್ಸೇಕರ್ ಅವರು ವಿಧಾನಸಭೆ ಚುನಾವಣೆಯಲ್ಲಿ ಮಾಂಡ್ರೆಮ್ ಕ್ಷೇತ್ರದಿಂದ ಪಕ್ಷೇತರರಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.
ಬಿಜೆಪಿ ಟಿಕೆಟ್ ನಿರಾಕರಿಸಿದ್ದರಿಂದ ಅವರು ಪಕ್ಷಕ್ಕೆ ನಿನ್ನೆಯಷ್ಟೇ (ಜ.22) ರಾಜೀನಾಮೆ ನೀಡಿ ಹೊರ ಬಂದಿದ್ದರು.
ಪರ್ಸೇಕರ್ ಮಾಂಡ್ರೆಮ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ದತೆ ನಡೆಸಿದ್ದರು. ಆದರೆ, ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದರಿಂದ ಪಕ್ಷ ತೊರೆದಿದ್ದಾರೆ.
ಗೋವಾ ವಿಧಾನಸಭೆ ಚುನಾವಣೆಯ ಬಿಜೆಪಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಹಾಗೂ ಬಿಜೆಪಿ ಕೋರ್ ಕಮಿಟಿ ಸದಸ್ಯರಾಗಿದ್ದ ಲಕ್ಷ್ಮಿಕಾಂತ್ ಪರ್ಸೆಕರ್ 2002 ರಿಂದ 2017 ರವರೆಗೆ ಮಾಂಡ್ರೆಮ್ ಕ್ಷೇತ್ರ ಪ್ರತಿನಿಧಿಸುತ್ತಾ ಬಂದಿದ್ದರು. 2017 ರಲ್ಲಿ ಸೋತಿದ್ದರು.
ಬಿಜೆಪಿ ತೊರೆದ ಮೇಲೆ ಅನೇಕ ಪಕ್ಷಗಳು ನನ್ನನ್ನು ಸಂಪರ್ಕಿಸಿವೆ. ಆದರೆ, ನಾನು ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಶೀಘ್ರದಲ್ಲೇ ನಾಮಪತ್ರ ಸಲ್ಲಿಸಲಿದ್ದೇನೆ ಎಂದಿದ್ದಾರೆ.
ಲಕ್ಷ್ಮಿಕಾಂತ್ ಪರ್ಸೇಕರ್ 2014 ರಿಂದ 2017 ರವರೆಗೆ ಗೋವಾ ಮುಖ್ಯಮಂತ್ರಿಯಾಗಿದ್ದರು. ಗೋವಾದ 40 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರುವರಿ 14 ರಂದು ಚುನಾವಣೆ ನಡೆಯಲಿದೆ.