ನವದೆಹಲಿ: ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದರು.
ದೇಶದಲ್ಲಿ ಚಾಲ್ತಿಯಲ್ಲಿರುವ ಬೆದರಿಕೆ ಪರಿಸ್ಥಿತಿ ಮತ್ತು ಭದ್ರತಾ ಸವಾಲುಗಳನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ಕೇಂದ್ರೀಯ ಗುಪ್ತಚರ ಸಂಸ್ಥೆಗಳು, ಸಿಎಪಿಎಫ್‍ಗಳು, ಸಶಸ್ತ್ರ ಪಡೆಗಳ ಗುಪ್ತಚರ ವಿಭಾಗಗಳು, ಕಂದಾಯ ಮತ್ತು ಹಣಕಾಸು ಗುಪ್ತಚರ ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಡಿಜಿಪಿಗಳು ಕೂಡ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಭಯೋತ್ಪಾದನೆ ಮತ್ತು ಜಾಗತಿಕ ಭಯೋತ್ಪಾದಕ ಗುಂಪುಗಳ ನಿರಂತರ ಬೆದರಿಕೆಗಳು, ನಾರ್ಕೋ-ಭಯೋತ್ಪಾದನೆ, ಸಂಘಟಿತ ಅಪರಾಧ-ಭಯೋತ್ಪಾದನೆ ಸಂಬಂಧ, ಸೈಬರ್‍ಸ್ಪೇಸ್‍ನ ಅಕ್ರಮ ಬಳಕೆಯನ್ನು ಎತ್ತಿ ಹಿಡಿದ ಗೃಹ ಸಚಿವರು, ಭದ್ರತಾ ಸವಾಲುಗಳನ್ನು ಎದುರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಭದ್ರತಾ ಏಜೆನ್ಸಿಗಳ ನಡುವೆ ಉತ್ತಮ ಸಮನ್ವಯ ಮತ್ತು ಸಿನರ್ಜಿಯ ಅಗತ್ಯವನ್ನು ಒತ್ತಿ ಹೇಳಿದರು.