ಕಾಸರಗೋಡು: ಕಾಲಕ್ಕೆ ತಕ್ಕಂತೆ ಶಿಕ್ಷಣದ ಗುಣಮಟ್ಟ ಹೆಚ್ಚಬೇಕು. ಓದು ಕೆಲಸಕ್ಕೆ ಸೀಮಿತವಾಗಬಾರದು ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನ ಕಲಿಯಲು ಹೆಚ್ಚಿನ ಅವಕಾಶ ಅತ್ಯಗತ್ಯ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್ ತಿಳಿಸಿದರು.
ಜಿಲ್ಲಾ ಸಾಕ್ಷರತಾ ಮಿಷನ್ ವತಿಯಿಂದ ಸಮತ್ವ ಪರೀಕ್ಷೆಯಲ್ಲಿ ಉನ್ನತ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಲು ಹಮ್ಮಿಕೊಂಡಿದ್ದ ವಿಜಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಜಿಲ್ಲಾ ಸಾಕ್ಷರತಾ ಮಿಷನ್‍ನ ಉಪಕ್ರಮದಲ್ಲಿ ಹತ್ತನೇ ತರಗತಿಯ ಸಮತ್ವ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ 25 ಹಿರಿಯ ವಿದ್ಯಾರ್ಥಿಗಳು, ಉತ್ಕøಷ್ಟ ಸಾಕ್ಷರತಾ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಿರಿಯ ವಿದ್ಯಾರ್ಥಿಗಳು ಮತ್ತು ಪ್ರೌಢಶಾಲಾ ಸಮತ್ವ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಆರು ಮಂದಿ ವಿದ್ಯಾರ್ಥಿಗಳನ್ನು ಈ ಸಂದರ್ಭ ಅ|ಭಿನಂದಿಸಿ ಗೌರವಿಸಲಾಯಿತು.
ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ನ್ಯಾಯವಾದಿ ಎಸ್.ಎನ್.ಸರಿತಾ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಗೀತಾಕೃಷ್ಣನ್, ಜಿಲ್ಲಾ ಪಂಚಾಯಿತಿ ಹಣಕಾಸು ಅಧಿಕಾರಿ ಎಸ್.ಎಂ.ದಿಲೀಪ್, ಜಿಲ್ಲಾ ಸಾಕ್ಷರತಾ ಸಮಿತಿ ಸದಸ್ಯ ಪಪ್ಪನ್ ಕುಟ್ಟಮತ್ ಮಾತನಾಡಿದರು. ಸಾಕ್ಷರತಾ ಮಿಷನ್ ಜಿಲ್ಲಾ ಸಂಯೋಜಕ ಪಿ.ಎನ್.ಬಾಬು ಸ್ವಾಗತಿಸಿ, ನೋಡಲ್ ಪ್ರೇರಕ ಡಿ.ವಿಜಯಮ್ಮ ವಂದಿಸಿದರು.