ಕೋಝಿಕ್ಕೋಡ್: ಗಣರಾಜ್ಯೋತ್ಸವದ ಅಂಗವಾಗಿ ಕಾಸರಗೋಡಲ್ಲಿ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿದ ಸಚಿವ ಅಹ್ಮದ್ ದೇವರಕೋವಿಲ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಒತ್ತಾಯಿಸಿದ್ದಾರೆ.
ಕಾಸರಗೋಡು ಮುನ್ಸಿಪಲ್ ಸ್ಟೇಡಿಯಂನಲ್ಲಿ ನಡೆದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಧ್ವಜವನ್ನು ತಲೆಕೆಳಗಾಗಿ ಹಾರಿಸಲಾಗಿತ್ತಾದರೂ ಅದು ಸಚಿವರ ಅಥವಾ ಇತರ ಅಧಿಕಾರಿಗಳ ಗಮನಕ್ಕೆ ಬಂದಿಲ್ಲ ಎಂದು ಹೇಳಿದರೆ ನಂಬಲು ಸಾಧ್ಯವಿಲ್ಲ. ಧ್ವಜವನ್ನು ತಲೆಕೆಳಗಾಗಿ ಹಾರಿಸಿದ ನಂತರ ಸಚಿವ ಅಹಮದ್ ದೇವರಕೋವಿಲ್ ವಂದನೆ ನಿರ್ವಹಿಸಿದರು. ಇದಾದ ಬಳಿಕ ಧ್ವಜವನ್ನು ತಲೆಕೆಳಗಾಗಿ ಹಾರಿಸಲಾಗಿದೆ ಎಂದು ಮಾಧ್ಯಮಗಳು ಗಮನ ಸೆಳೆದವು.
ಇಷ್ಟು ದೊಡ್ಡ ತಪ್ಪಾದರೂ ಸಚಿವರು ಹಾಗೂ ಇತರೆ ಪೋಲೀಸ್ ಅಧಿಕಾರಿಗಳು ತಪ್ಪಿನ ಅರಿವಾಗದಿರುವುದು ವಿಪರ್ಯಾಸ. ಜಿಲ್ಲಾ ಪೋಲೀಸ್ ಮುಖ್ಯಸ್ಥರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ |ಘಟನೆಯ ಬಗ್ಗೆ ಡಿಜಿಪಿ ತನಿಖೆ ನಡೆಸಬೇಕು ಎಂದು ಸುರೇಂದ್ರನ್ ಆಗ್ರಹಿಸಿದ್ದಾರೆ.