ಬೆಂಗಳೂರು: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ನೈಟ್ಕರ್ಫ್ಯೂ ಜಾರಿ ಮಾಡಿರುವ ಹಿನ್ನೆಲೆ ಜನವರಿ 5ರ ರಾತ್ರಿ 10 ಗಂಟೆಯಿಂದ ಜನವರಿ 19ರವರೆಗೆ ನೈಟ್ ಕರ್ಫ್ಯೂ ಇರುವ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದೆ.
ಅದರಂತೆ, ಪ್ರಯಾಣಿಕರ ಅನುಕೂಲಕ್ಕಾಗಿ ರಾತ್ರಿ ವೇಳೆ ಬಸ್ ಸಂಚಾರವಿರುತ್ತದೆ. ಜನದಟ್ಟಣೆ ಗಮನದಲ್ಲಿಟ್ಟುಕೊಂಡು ಅವಶ್ಯಕತೆಗೆ ಅನುಗುಣವಾಗಿ ರಾಜ್ಯದಲ್ಲಿ ಸಾರಿಗೆ ಸಂಸ್ಥೆ ಬಸ್ಗಳನ್ನು ರಸ್ತೆಗಿಳಿಸಲಾಗುವುದು ಎಂದು ತಿಳಿಸಲಾಗಿದೆ.
ರಾತ್ರಿ ಸೇವೆ ಆನ್ಲೈನ್ ಬುಕಿಂಗ್ ವ್ಯವಸ್ಥೆಗೆ ಒಳಪಡಿಸುವುದು. ಮುಂಗಡ ಟಿಕೆಟ್ ಕಾಯ್ದಿರಿಸುವಿಕೆ ಆಧಾರದಲ್ಲಿ ಬಸ್ ಸಂಚಾರ ಮಾಡಲಾಗುತ್ತದೆ. ಕೇರಳ, ಮಹಾರಾಷ್ಟ್ರ, ಗೋವಾಗೆ ಕರ್ನಾಟಕದಿಂದ ಬಸ್ ಇರುತ್ತೆ. ಕೊರೊನಾ ಲಸಿಕೆ ಪಡೆಯದಿದ್ದರೂ RTPCR ಟೆಸ್ಟ್ ರಿಪೋರ್ಟ್ ಬೇಕು. 72 ಗಂಟೆಯೊಳಗಿನ ನೆಗೆಟಿವ್ ವರದಿ ನೀಡಿ ಪ್ರಯಾಣಿಸಬಹುದು ಎಂದು ಹೇಳಕಾಗಿದೆ. ಸಿಬ್ಬಂದಿ, ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೊವಿಡ್ ನಿಯಮ ಪಾಲಿಸಿ ಸಾರಿಗೆ ಬಸ್ನಲ್ಲಿ ಓಡಾಡಬಹುದು ಎಂದು ತಿಳಿಸಲಾಗಿದೆ.
ವೀಕೆಂಡ್ ಕರ್ಫ್ಯೂ ವೇಳೆ ಬೆಂಗಳೂರು ಮೆಟ್ರೋ ಸಂಚಾರ ಹೇಗಿರಲಿದೆ?
ವೀಕೆಂಡ್ ಲಾಕ್ಡೌನ್ ವೇಳೆ ಬೆಂಗಳೂರು ನಮ್ಮ ಮೆಟ್ರೋ ರೈಲು ಸಂಚಾರಕ್ಕೆ ಸಮಯ ನಿಗದಿ ಮಾಡಲಾಗಿದೆ. ನಾಗಸಂದ್ರ ಮೆಟ್ರೋ ನಿಲ್ದಾಣ, ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣ, ಕೆಂಗೇರಿ ಮೆಟ್ರೋ ನಿಲ್ದಾಣ, ಬೈಯ್ಯಪ್ಪನಹಳ್ಳಿಯಿಂದ ಸಂಚಾರ ಮಾಡುವ ಮೆಟ್ರೋ ರೈಲುಗಳಿಗೆ ಸಮಯ ನಿಗದಿಪಡಿಸಲಾಗಿದೆ. ಬೆಳಗ್ಗೆ 8 ಗಂಟೆಯಿಂದ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಪ್ರತಿ 20 ನಿಮಿಷಕ್ಕೊಮ್ಮೆ ನಮ್ಮ ಮೆಟ್ರೋ ರೈಲು ಸಂಚಾರ ಇರಲಿದೆ ಎಂದು ಹೇಳಲಾಗಿದೆ.
ಬೆಳಗ್ಗೆ 8 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಮೆಟ್ರೋ ರೈಲು ಕಾರ್ಯಾಚರಣೆ ಮಾಡಲಿದೆ. ಉಳಿದಂತೆ ವಾರದ 5 ದಿನಗಳಲ್ಲಿ ಮೆಟ್ರೋ ಎಂದಿನಂತೆ ಸಂಚರಿಸಲಿದೆ ಎಂದು ಬಿಎಂಆರ್ಸಿಎಲ್ನಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.
ನಮ್ಮ ಮೆಟ್ರೋದಲ್ಲಿ ಶೇಕಡಾ 50ರಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶ
ವೀಕೆಂಡ್ ಕರ್ಫ್ಯೂ ವೇಳೆ ನಮ್ಮ ಮೆಟ್ರೋ ಸಂಚಾರಕ್ಕೆ ಅಡ್ಡಿಯಿಲ್ಲ. ಶನಿವಾರ ಮತ್ತು ಭಾನುವಾರ ಎಂದಿನಂತೆ ನಮ್ಮ ಮೆಟ್ರೋ ರೈಲು ಸಂಚರಿಸಲಿದೆ. ನಮ್ಮ ಮೆಟ್ರೋ ಹಸಿರು, ನೇರಳೆ ಮಾರ್ಗದಲ್ಲಿ ಯಾವುದೇ ಬದಲಾವಣೆಯಿಲ್ಲ. ನಮ್ಮ ಮೆಟ್ರೋದಲ್ಲಿ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಅವಕಾಶ ಇರಲಿದೆ. ಮೆಟ್ರೋ ರೈಲಿನಲ್ಲಿ ಸದ್ಯ 1800-1900 ಜನ ಪ್ರಯಾಣಿಸುತ್ತಿದ್ದಾರೆ. ಕೊವಿಡ್ ಹೆಚ್ಚಳ ಹಿನ್ನೆಲೆ 800-900 ಜನ ಪ್ರಯಾಣಕ್ಕೆ ಅವಕಾಶ ನೀಡಲಿದ್ದೇವೆ ಎಂದು ಬಿಎಂಆರ್ಸಿಎಲ್ ಎಂಡಿ ಅಂಜುಂ ಪರ್ವೇಜ್ ತಿಳಿಸಿದ್ದಾರೆ.
ಕೊರೊನಾ ನಿಯಮ ಪಾಲಿಸಿ ಮೆಟ್ರೋ ರೈಲು ಓಡಿಸಲು ನಿರ್ಧಾರ ಮಾಡಿದ್ದೇವೆ. ನಮ್ಮ ಮೆಟ್ರೋ ಸಂಚಾರದ ಅವಧಿ ಕಡಿತಗೊಳಿಸಿ ಮೆಟ್ರೋ ಕಾರ್ಯಾಚರಣೆ ನಡೆಸಲಿದೆ. ಪ್ರಸ್ತುತ 15 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚರಿಸುತ್ತಿದೆ. ವೀಕೆಂಡ್ ಕರ್ಫ್ಯೂ ವೇಳೆ 30 ನಿಮಿಷಕ್ಕೊಂದು ಮೆಟ್ರೋ ಸಂಚಾರ ಮಾಡಲಿದೆ. ಎಂದು ಟಿವಿ9ಗೆ ಬಿಎಂಆರ್ಸಿಎಲ್ ಎಂಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ.