ಪೆರ್ಲ: ಎಣ್ಮಕಜೆ ಗ್ರಾ.ಪಂ.ಹಾಗೂ ಕುಟುಂಬ ಆರೋಗ್ಯ ಕೇಂದ್ರದ ವತಿಯಿಂದ ಪಾಲಿಟೀವ್ ಕೇರ್ ದಿನಾಚರಣೆಯನ್ನು ಸ್ನೇಹ ಸಂಗಮ ಎಂಬ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತಿ ವ್ಯಾಪ್ತಿಯಲ್ಲಿ ಆಯ್ದ ವಿವಿಧ ರೋಗಿಗಳಿಗೆ ಉಚಿತ ಆಹಾರ ಸಾಮಾಗ್ರಿ ಕಿಟ್ ವಿತರಿಸಲಾಯಿತು.
ಎಣ್ಮಕಜೆ ಗ್ರಾ.ಪಂ.ಅಧ್ಯಕ್ಷ ಸೋಮಶೇಖರ್ ಜೆ.ಎಸ್. ಕಾರ್ಯಕ್ರಮ ಉದ್ಘಾಟಿಸಿದರು. ಉಪಾಧ್ಯಕ್ಷೆ ಡಾ.ಫಾತಿಮತ್ ಝಹನಾಸ್ ಹಂಸಾರ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಪಂಚಾಯಿತಿ ಸದಸ್ಯ ನಾರಾಯಣ ನಾಯ್ಕ, ಬ್ಲಾಕ್ ಪಂ.ಸದಸ್ಯ ಬಟ್ಟು ಶೆಟ್ಟಿ, ಗ್ರಾ.ಪಂ.ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್. ಗಾಂಭೀರ್, ಅರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಶ್ರೀ ಎ.ಕುಲಾಲ್, ಪಂ. ಸದಸ್ಯರಾದ ರಾಧಾಕೃಷ್ಣ ನಾಯಕ್ ಶೇಣಿ, ಉಷಾ ಕುಮಾರಿ,ಕುಸುಮಾವತಿ ಮೊದಲಾದವರು ಭಾಗವಹಿಸಿದ್ದರು. ಆರೋಗ್ಯ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಕುಟುಂಬ ಆರೋಗ್ಯ ಕೇಂದ್ರದ ವೈದಾಧಿಕಾರಿ ಡಾ.ದೀಪರಾಜ್ ಸ್ವಾಗತಿಸಿ, ಗಿರೀಶ್ ವಿ.ಎಸ್. ವಂದಿಸಿದರು.