ನವದೆಹಲಿ: ಕಾಶ್ಮೀರದ ಹಣ್ಣು ಬೆಳೆಗಾರರು ಇರಾನಿ ಸೇಬು ಭಾರತದ ಮಾರುಕಟ್ಟೆ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಭಾರತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಇರಾನಿ ಸೇಬು ಮಾರಾಟದಿಂದ ಕಾಶ್ಮೀರದ ಹಣ್ಣು ಬೆಳೆಗಾರರು ಈಗಾಗಲೇ ನಷ್ಟವನ್ನು ಎದುರಿಸುತ್ತಿರುವುದಾಗಿ ಅವರು ಹೇಳಿದ್ದಾರೆ.
ಜೊತೆಗೆ ಇರಾನ್ ಸೇಬಿಗೆ ನಿರ್ಬಂಧ ಹೇರಲು ಸಾಧ್ಯವಾಗದಿದ್ದಲ್ಲಿ ಅದರ ಮೇಲೆ ಹೆಚ್ಚಿನ ತೆರಿಗೆಯನ್ನು ವಿಧಿಸುವಂತೆ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.