ತಿರುವನಂತಪುರ: ಕೇರಳದಲ್ಲಿ ಇಂದು 55,475 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದು ರಾಜ್ಯದಲ್ಲಿ ಕೋವಿಡ್ 3ನೇ ಅಲೆಯ ಮಧ್ಯ ಕಾಲಘಟ್ಟವೆಂದು ತಿಳಿಯಲಾಗಿದೆ.
ಇಂದು ಎರ್ನಾಕುಳಂ 9405, ತಿರುವನಂತಪುರ 8606, ತೃಶೂರ್ 5520, ಕೊಲ್ಲಂ 4452, ಕೋಝಿಕ್ಕೋಡ್ 4432, ಕೋಟ್ಟಯಂ 3672, ಪಾಲಕ್ಕಾಡ್ 3550, ಮಲಪ್ಪುರಂ 3138, ಕಣ್ಣೂರು 2578, ಆಲಪ್ಪುಳ 2561, ಇಡುಕ್ಕಿ 2452, ಪತ್ತನಂತಿಟ್ಟ 2311, ಕಾಸರಗೋಡು 1728, ವಯನಾಡ್ 1070 ಎಂಬಂತೆ ಸೋಂಕು ದೃಢಪಡಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ 1,12,281 ಮಾದರಿಗಳನ್ನು ಪರೀಕ್ಷಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 4,42,466 ಮಂದಿ ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 4,32,124 ಮಂದಿ ಮನೆ/ಸಾಂಸ್ಥಿಕ ಕ್ವಾರಂಟೈನ್‍ನಲ್ಲಿದ್ದಾರೆ ಮತ್ತು 10,342 ಮಂದಿ ಆಸ್ಪತ್ರೆಗಳಲ್ಲಿದ್ದಾರೆ. ಒಟ್ಟು 1387 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಸ್ತುತ, 2,85,365 ಕೊರೋನಾ ಪ್ರಕರಣಗಳಲ್ಲಿ, ಕೇವಲ 3.8 ಪ್ರತಿಶತದಷ್ಟು ಜನರು ಆಸ್ಪತ್ರೆ / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಕೋವಿಡ್ ಬಾಧಿಸಿ 70 ಮಂದಿ ಮೃತರಾಗಿದ್ದಾರೆ. ಅಲ್ಲದೆ, ಸುಪ್ರೀಂ ಕೋರ್ಟ್‍ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ 84 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 52,141ಕ್ಕೆ ಏರಿಕೆಯಾಗಿದೆ.
ಇಂದು, ಸೋಂಕು ಪತ್ತೆಯಾದವರಲ್ಲಿ 139 ಮಂದಿ ಜನರು ಹೊರ ರಾಜ್ಯದವರು. 51,547 ಮಂದಿ ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 3373 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. 506 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಸೋಂಕು ದೃಢಪಡಿಸಲಾಗಿದೆ. ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದವರಲ್ಲಿ 30,226 ಮಂದಿ ಚೇತರಿಸಿಕೊಂಡಿದ್ದಾರೆ.
ತಿರುವನಂತಪುರ 8267, ಕೊಲ್ಲಂ 632, ಪತ್ತನಂತಿಟ್ಟ 866, ಆಲಪ್ಪುಳ 822, ಕೊಟ್ಟಾಯಂ 1706, ಇಡುಕ್ಕಿ 599, ಎರ್ನಾಕುಳಂ 8641, ತ್ರಿಶೂರ್ 1515, ಪಾಲಕ್ಕಾಡ್ 1156, ಮಲಪ್ಪುರಂ 1061, ಕೋಝಿಕೋಡ್ 2966,ವಯನಾಡ್ 214, ಕಣ್ಣೂರು 1170, ಕಾಸರಗೋಡು 611 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ 2,85,365 ಮಂದಿಗೆ ಸೋಂಕು ದೃಢಪಟ್ಟಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 53,86,868 ಮಂದಿ ಕೊರೊನಾದಿಂದ ಮುಕ್ತರಾಗಿದ್ದಾರೆ.