ಕಾಸರಗೋಡು: ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಲಾದ ಘಟನೆ ನಡೆದಿದೆ. ಅದು ನಮ್ಮ ಕಾಸರಗೋಡಲ್ಲಿ!
ಜಿಲ್ಲಾ ಮಟ್ಟದ ಧ್ವಜಾರೋಹಣವನ್ನು ಸಚಿವ ಅಹ್ಮದ್ ದೇವರಕೋವ್ ನೆರವೇರಿಸಿದರು. ಕಾಸರಗೋಡು ಮುನ್ಸಿಪಲ್ ಸ್ಟೇಡಿಯಂನಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಧ್ವಜವನ್ನು ತಲೆಕೆಳಗಾಗಿ ಹಾರಿಸಿರುವುದು ಸಚಿವರಾಗಲೀ ಅಥವಾ ಇತರ ಅಧಿಕಾರಿಗಳಾಗಲೀ ಗಮನಕ್ಕೆ ಬಂದಿರಲಿಲ್ಲ.
ರಾಷ್ಟ್ರಧ್ವಜ ತಲೆಕೆಳಗಾಗಿ ಹಾರಿಸಿದ ನಂತರ ಸಚಿವ ಅಹಮದ್ ದೇವರಕೋವಿಲ್ ವಂದಿಸಿದರು. ಇದಾದ ಬಳಿಕ ಧ್ವಜವನ್ನು ತಲೆಕೆಳಗಾಗಿ ಹಾರಿಸಲಾಗಿದೆ ಎಂದು ಮಾಧ್ಯಮಗಳು ಗಮನ ಸೆಳೆದವು. ಆಗ ಸಚಿವರು ಮತ್ತು ಇತರ ಅಧಿಕಾರಿಗಳು ಗಮನಿಸಿದರು. ನಂತರ ಧ್ವಜವನ್ನು ಮತ್ತೆ ಸರಿಯಾಗಿ ಹಾರಿಸಲಾಯಿತು.
Shame on you people
ಪ್ರತ್ಯುತ್ತರಅಳಿಸಿ