HEALTH TIPS

ಕೋವಿಡ್ ಶಂಕಿತ ಪ್ರಕರಣವೆಂದು ಪರಿಗಣಿಸಲು ಕೇಂದ್ರ ಸೂಚಿಸಿದ ಮಾನದಂಡವಿದು...

Top Post Ad

Click to join Samarasasudhi Official Whatsapp Group

Qries

    ನವದೆಹಲಿ: ಕೋವಿಡ್-19 ಶಂಕಿತ ಪ್ರಕರಣವೆಂದು ಪರಿಗಣಿಸಲು ಯಾವ ಮಾನದಂಡ ಅನುಸರಿಸಬೇಕು ಎಂಬುದನ್ನು ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

     ಯಾವುದೇ ವ್ಯಕ್ತಿಯು ಕೆಮ್ಮು, ತಲೆನೋವು, ಗಂಟಲು ಕೆರೆತ, ಉಸಿರಾಟ ಸಮಸ್ಯೆ, ಮೈ-ಕೈ ನೋವು, ರುಚಿ ಮತ್ತು ವಾಸನಾ ಶಕ್ತಿ ಕಳೆದುಕೊಂಡಿರುವುದು, ಆಯಾಸ, ಅತಿಸಾರದೊಂದಿಗೆ ಜ್ವರ ಹೊಂದಿದ್ದರೆ ಅಥವಾ ಈ ಲಕ್ಷಣಗಳಿಲ್ಲದೇ ಜ್ವರದಿಂದ ಬಳಲುತ್ತಿದ್ದರೆ, ಇದು ಬೇರೆ ಯಾವುದೇ ಸೋಂಕು ಅಲ್ಲ ಎಂಬುದು ಖಚಿತವಾದರೆ ಶಂಕಿತ ಕೋವಿಡ್ ಪ್ರಕರಣವೆಂದು ಪರಿಗಣಿಸಬೇಕು ಎಂದು ಆರೋಗ್ಯ ಸಚಿವಾಲಯ ಹೇಳಿದೆ.

     ವಿವಿಧ ಪ್ರದೇಶಗಳಲ್ಲಿ ಕೋವಿಡ್ ಪರೀಕ್ಷಾ ಕೇಂದ್ರಗಳನ್ನು ತೆರೆಯುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಕೇಂದ್ರದ (ಐಸಿಎಂಆರ್) ನಿರ್ದೇಶಕ ಡಾ.ಬಲರಾಂ ಭಾರ್ಗವ ಪತ್ರ ಬರೆದಿದ್ದಾರೆ. ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿಯನ್ನು ಸಿದ್ಧರಾಗಿರುವಂತೆ ನೋಡಿಕೊಳ್ಳಲು ಮತ್ತು ಮನೆಯಲ್ಲೇ ಪರೀಕ್ಷೆ ಮಾಡುವಂಥ ಕಿಟ್‌ಗಳ ಬಳಕೆಗೆ ಉತ್ತೇಜನ ನೀಡುವಂತೆಯೂ ಪತ್ರದಲ್ಲಿ ಸೂಚಿಸಲಾಗಿದೆ ಎಂದು 'ಎಎನ್‌ಐ' ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.



     ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಓಮೈಕ್ರಾನ್‌ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಆರೋಗ್ಯ ಸಚಿವಾಲಯ ಈ ಸೂಚನೆ ನೀಡಿದೆ.

      ಭಾರತದಲ್ಲಿ ಶುಕ್ರವಾರ ಬೆಳಿಗ್ಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ 309 ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಈವರೆಗೆ ಸೋಂಕಿತರಾದವರ ಸಂಖ್ಯೆ 1,270ಕ್ಕೆ ಏರಿಕೆಯಾಗಿದೆ. 374 ಮಂದಿ ಸೋಂಕಿತರು ಈವರೆಗೆ ಚೇತರಿಸಿಕೊಂಡಿದ್ದಾರೆ

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries