ಮಂಜೇಶ್ವರ: ಕಡಂಬಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಮಿತಿಯ ರೂಪೀಕರಣ ಸಭೆ ಕ್ಷೇತ್ರದಲ್ಲಿ ನಡೆಯಿತು.
ಸಭೆಯನ್ನು ಕ್ಷೇತ್ರದ ತಂತ್ರಿ ವರ್ಕಾಡಿ ದಿನೇಶ್ ತಂತ್ರಿಗಳವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷÀ ಜಯರಾಮ ಶೆಟ್ಟಿ ಕಡಂಬಾರು ವಹಿಸಿದ್ದರು.
ವೇದಿಕೆಯಲ್ಲಿ ಕ್ಷೇತ್ರದ ಪವಿತ್ರಪಾಣಿ ಸುಬ್ರಹ್ಮಣ್ಯ ಅನಲತ್ತಾಯ, ವೇದಮೂರ್ತಿ ಬಾಲಕೃಷ್ಣ ತಂತ್ರಿ ದಡ್ಡ0ಗಡಿ, ಕೋಳ್ಯೂರು ಶ್ರೀ ಶಂಕರನಾರಾಯಣ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ನ್ಯಾಯವಾದಿ. ವಿಠಲ್ ಭಟ್, ಐಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ನಾರಾಯಣ ಹೆಗ್ಡೆ ಕೋಡಿಬೈಲು, ಮಹಿಳಾ ಸಮಿತಿ ಅಧ್ಯಕ್ಷೆ ಸುಂದರಿ ಆರ್.ಶೆಟ್ಟಿ ಕಡಂಬಾರು, ಕ್ಷೇತ್ರದ ಆಡಳಿತ ಮೊಕ್ತೇಸರ ಎಸ್.ಎನ್ ಕಡಂಬಾರು, ಸೇವಾ ಸಮಿತಿ ಅಧ್ಯಕ್ಷ ಚಂದಪ್ಪ ಶೆಟ್ಟಿ ಕಜೆಕೋಡಿ ಮೊದಲಾದವರು ಉಪಸ್ಥಿತರಿದ್ದರು. ಬ್ರಹ್ಮ ಕಲಶೋತ್ಸವ ಸಮಿತಿಯ ನೂತನ ಪಧಾಧಿಕಾರಿಗಳ ವಿವರಗಳನ್ನು ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ರಾವ್ ಕಡಂಬಾರು ಘೋಷಿಸಿದರು. ಸಮಿತಿಯ ಗೌರವಾಧ್ಯಕ್ಷ ಸದಾಶಿವ ಶೆಟ್ಟಿ ಕುಳೂರು ಕನ್ಯಾನ, ಅಧ್ಯಕ್ಷರಾಗಿ ಡಾ. ಶ್ರೀಧರ್ ಭಟ್ ಉಪ್ಪಳ, ಕಾರ್ಯಾಧ್ಯಕ್ಷರಾಗಿ ಶ್ರೀ ಲಕ್ಷ್ಮೀಶ ರಾವ್ ಕಡಂಬಾರು, ಪ್ರಧಾನ ಕಾರ್ಯದರ್ಶಿಯಾಗಿ ಚಿದಂಬರಂ ಕೋಡಿಜಾಲ್ ಸೇರಿದಂತೆ ವಿವಿಧ ಉಪ ಸಮಿತಿಗಳನ್ನು ಘೋಷಿಸಲಾಯಿತು. ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ರಾವ್ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಸಂಕಬೈಲು ಸತೀಶ್ ಅಡಪ ನಿರೂಪಿಸಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಚಿದಂಬರಂ ಕೋಡಿಜಾಲ್ ವಂದಿಸಿದರು. ಸಭೆಯಲ್ಲಿ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ, ಸೇವಾ ಸಮಿತಿ, ಮಹಿಳಾ ಸಮಿತಿ, ಸೇವಾ ಸ್ಪೂರ್ತಿಯ ಪಧಾಧಿಕಾರಿಗಳು ಹಾಗೂ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ನವೀಕೃತ ಅಷ್ಟಬಂಧ ಬ್ರಹ್ಮ ಕಲಶೋತ್ಸವವು ಏಪ್ರಿಲ್ ತಿಂಗಳ 03 ರಿಂದ ಮೊದಲ್ಗೊಂಡು 10 ರ ತನಕ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.